ಕಾಂತಾರ ಕ್ರೆಡಿಟ್ ದೈವನರ್ತಕ ಸಮುದಾಯಕ್ಕೆ, ಪ್ರಶಸ್ತಿ ದೈವದ ಪಾದಕ್ಕೆ..

ಕಾಂತಾರ ಕ್ರೆಡಿಟ್ ದೈವನರ್ತಕ ಸಮುದಾಯಕ್ಕೆ, ಪ್ರಶಸ್ತಿ ದೈವದ ಪಾದಕ್ಕೆ..


ಮಂಗಳೂರು: ಕಾಂತಾರ ಸಿನಿಮಾ ಯಶಸ್ಸಿನ ಎಲ್ಲ ಹೆಗ್ಗಳಿಕೆ, ಪ್ರಶಸ್ತಿಗಳು ದೈವ ನರ್ತಕ ಸಮುದಾಯಕ್ಕೆ ಸಲ್ಲಬೇಕು ಎಂದು ಕಾಂತಾರ ಸಿನಿಮಾಗೆ ರಾಷ್ಟ್ರೀಯ ಪ್ರಶಸ್ತಿ ಸ್ವೀಕರಿಸಿದ  ನಿರ್ದೇಶಕ, ನಟ ರಿಷಬ್ ಶೆಟ್ಟಿ ಹೇಳಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರಲ್ಲಿ ಮಾತನಾಡಿದ ಅವರು, ಈ ರಾಷ್ಟ್ರೀಯ ಪ್ರಶಸ್ತಿ ನಮ್ಮ ಇಡೀ ತಂಡಕ್ಕೆ ಸಲ್ಲಬೇಕು. ಸುಮಾರು 200-300 ಜನ  ಒಂದು ಕೋರ್ ಟೀಮ್ ಆಗಿ ಕೆಲಸ ಮಾಡಿದ್ದೇವೆ. ಇದು ದೈವದ ಬಗ್ಗೆ, ದೈವ ನರ್ತಕರ ಬಗ್ಗೆ, ಅವರ ಸಮುದಾಯದ ಬಗ್ಗೆ ಇರುವ ಸಿನಿಮಾ. ರಾಷ್ಟ್ರೀಯ ಪ್ರಶಸ್ತಿಯ  ಹಿರಿಮೆ ದೈವ ನರ್ತಕ ಸಮುದಾಯಕ್ಕೆ ಸೇರಬೇಕು. ದೈವದ ಆಶೀರ್ವಾದ ಇಲ್ಲದಿದ್ದರೆ ಸಿನಿಮಾ ಈ ಮಟ್ಟಕ್ಕೆ ಹೋಗುತ್ತಿರಲಿಲ್ಲ. ದೈವದ ಆಶೀರ್ವಾದದಿಂದ ಸಿನಿಮಾ ಇಲಿ  ತನಕ ಬಂದಿದೆ. ಆ ದೈವಕ್ಕೆ, ದೈವದ ಪಾದಕ್ಕೆ ಈ ಪ್ರಶಸ್ತಿಯನ್ನು ಅರ್ಪಿಸುತ್ತೇನೆ. ಚಿತ್ರ ಮಾಡುವಾಗ ಪ್ರಶಸ್ತಿ ಬರುತ್ತದೆ ಎಂದುಕೊಂಡಿರಲಿಲ್ಲ. ಇದೆಲ್ಲ ಜನರ ಪ್ರೀತಿಯಿಂದ ಸಾಧ್ಯವಾಗಿದೆ ಎಂದು ರಿಷಬ್ ಶೆಟ್ಟಿ ಸಂತಸದಿಂದ ಹೇಳಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article