
‘ಕ್ರಿಕೆಟ್ ಪಂದ್ಯಾವಳಿ ಸೌಹಾರ್ದತೆಗೆ ಪೂರಕವಾಗಲಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್
ಮಂಗಳೂರು: ಬ್ರ್ಯಾಂಡ್ ಮಂಗಳೂರು ಕ್ರಿಕೆಟ್ ಪಂದ್ಯಾವಳಿ ಸೌಹಾರ್ದತೆಗೆ ಪೂರಕವಾಗಲಿ. ಪಂದ್ಯಾವಳಿಯಲ್ಲಿ ಎಲ್ಲರೂ ಕ್ರೀಡಾ ಸ್ಪೂರ್ತಿಯೊಂದಿಗೆ ಭಾಗವಹಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.
ಅವರು ಬುಧವಾರ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ಪೊಲೀಸ್ ಕಮಿಷನರೇಟ್, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್, ಸಹ್ಯಾದ್ರಿ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಕಾಲೇಜು ಹಾಗೂ ರೋಹನ್ ಕಾರ್ಪೋರೇಶನ್ ನೇತೃತ್ವದಲ್ಲಿ ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ ಬುಧವಾರ ಅಡ್ಯಾರ್ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ಉದ್ಘಾಟಿಸಿದರು.
ಮುಖ್ಯ ಅತಿಥಿ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾತನಾಡಿ, ಮಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ ಎಲ್ಲಾ ಜನರನ್ನು ಒಗ್ಗೂಡಿಸುವ ಬ್ರ್ಯಾಂಡ್ ಮಂಗಳೂರು ಪರಿಕಲ್ಪನೆಯ ವಿವಿಧ ಕಾರ್ಯಕ್ರಮಗಳು ಸೌಹಾರ್ದ ತೆಯನ್ನು ಕಾಪಾಡುವ ನಿಟ್ಟಿನಲ್ಲಿ ಉತ್ತಮ ಪ್ರಯತ್ನ ಎಂದರು.ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ,ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಡಾ. ಆನಂದ ಕೆ ಶುಭ ಹಾರೈಸಿದರು. ರೋಹನ್ ಕಾರ್ಪೊರೇಷನ್‌ನ ಅಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ರೋಹನ್ ಮೊಂತೆರೊ ಪಂದ್ಯಾವಳಿಯ ಟ್ರೋಫಿ ಅನಾವರಣಗೊಳಿಸಿ ಶುಭ ಹಾರೈಸಿದರು.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀ ನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ,ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರ, ಸಹಾಯಕ ಕಮೀಷನರ್ ಹರ್ಷ ವರ್ಧನ್, ಸಹ್ಯಾದ್ರಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಟ್ರಸ್ಟಿ ದೇವದಾಸ್ ಹೆಗ್ಡೆ, ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಸಹಾಯಕ ಪ್ರಾಂಶುಪಾಲ ಸುಧೀರ್, ಡೀನ್ ರಮೇಶ್, ದೈಹಿಕ ಶಿಕ್ಷಣ ನಿರ್ದೇಶಕ ಕರುಣಾಕರ, ಸಹಾಯಕ ಪ್ರಾಧ್ಯಾಪಕ ವರುಣ್, ಪದ್ಮನಾಭ, ಪತ್ರಕರ್ತರ ಸಂಘದ ಪದಾಧಿಕಾರಿಗಳಾದ ಭಾಸ್ಕರ ರೈ ಕಟ್ಟ, ಪುಷ್ಪ ರಾಜ್ ಬಿ.ಎನ್., ವಿಲ್ಫ್ರೆಡ್ ಡಿ ಸೋಜ,ರಾಜೇಶ್ ಪೂಜಾರಿ ಉಪಸ್ಥಿತರಿದ್ದರು ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು. ಕಾರ್ಯದರ್ಶಿ ವಿಜಯ ಕೋಟ್ಯಾನ್ ಪಡು ಕಾರ್ಯಕ್ರಮ ನಿರೂಪಿಸಿದರು.
ಪಂದ್ಯಾವಳಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ತಂಡ, ಮಂಗಳೂರು ಪೊಲೀಸ್ ಆಯುಕ್ತರ ತಂಡ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ತಂಡ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವ ಹಣಾಧಿಕಾರಿ ತಂಡ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷರ ತಂಡಗಳು ಪಂದ್ಯಾವಳಿಯಲ್ಲಿ ಭಾಗವಹಿಸಿವೆ.