
ಟೆಕ್ವಾಂಡೊ: ಶಕ್ತಿ ಕಾಲೇಜಿನ ವಿದ್ಯಾರ್ಥಿ ಎಸ್‌ಜಿಎಫ್‌ಐಗೆ ಅಯ್ಕೆ
Tuesday, October 22, 2024
ಮಂಗಳೂರು: ಶಕ್ತಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ರಿಜ್ವಿತ್ ಜಗದೀಶ್ ಇವರು ಬಿಹಾರ ರಾಜ್ಯದ ಸಿವಾನ್‌ನಲ್ಲಿ ಅಕ್ಟೋಬರ್ 1 ರಿಂದ 4 ರವರೆಗೆ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಟೆಕ್ವಾಂಡೊ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಿ ಚಿನ್ನದ ಪದಕ ಪಡೆಯುವುದರ ಮೂಲಕ ಎಸ್.ಜಿ.ಎಫ್.ಐ. ರಾಷ್ಟ್ರೀಯ ಮಟ್ಟದ ಟೆಕ್ವಾಂಡೊ ಚಾಂಪಿಯನ್‌ಶಿಪ್‌ಗೆ ಅಯ್ಕೆಯಾಗಿರುತ್ತಾರೆ.
ಈ ಸಂದರ್ಭದಲ್ಲಿ ವಿಜೇತರನ್ನು ಸಂಸ್ಥೆಯ ಸಂಸ್ಥಾಪಕ ಡಾ. ಕೆ.ಸಿ. ನಾಕ್, ಕಾರ್ಯದರ್ಶಿ ಸಂಜಿತ್ ನಾಕ್, ಪ್ರಧಾನ ಸಲಹೆಗಾರ ರಮೇಶ್ ಕೆ., ಶಕ್ತಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವೆಂಕಟೇಶ ಮೂರ್ತಿ ಮತ್ತು ಶಕ್ತಿ ವಸತಿಶಾಲೆಯ ಪ್ರಾಂಶುಪಾಲೆ ಬಬಿತಾ ಸೂರಜ್ ಅಭಿನಂದಿಸಿದ್ದಾರೆ.