
ಬಿಜೆಪಿಯಿಂದ ಗಾಂಧಿ ಜಯಂತಿ ಆಚರಣೆ: ಗಾಂಧಿ ಪ್ರತಿಮೆಗೆ ಮಾಲಾರ್ಪಣೆ
Wednesday, October 2, 2024
ಮಂಗಳೂರು: ಬಿಜೆಪಿ ಸೇವಾಪಾಕ್ಷಿಕದ ಅಂಗವಾಗಿ, ದ.ಕ. ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾ ಯುವ ಮೋರ್ಚಾ ನೇತೃತ್ವದಲ್ಲಿ ಗಾಂಧಿ ಜಯಂತಿ ಆಚರಣೆ ಪ್ರಯುಕ್ತ ಲಾಲ್‌ಬಾಗ್‌ನಲ್ಲಿರುವ ಮಹಾತ್ಮ ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ನಮನಗಳನ್ನು ಸಲ್ಲಿಸಲಾಯಿತು.
ರಾಜ್ಯ ಬಿಜೆಪಿ ಕಾರ್ಯದರ್ಶಿ, ಸಂಸದ ಕ್ಯಾ. ಬ್ರಿಜೇಶ್ ಚೌಟ, ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್, ಮಹಾನಗರ ಪಾಲಿಕೆ ಮೇಯರ್ ಮನೋಜ್ ಕೋಡಿಕಲ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಉಪಾಧ್ಯಕ್ಷೆ ಪೂಜಾ ಪೈ, ಪ್ರಕೋಷ್ಠಗಳ ಸಂಚಾಲಕ ಸುಧೀರ್ ಶೆಟ್ಟಿ ಕಣ್ಣೂರು, ಯುವ ಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಮಂಗಳೂರು ನಗರದ ದಕ್ಷಿಣ ಮಂಡಲ ಬಿಜೆಪಿ ಅಧ್ಯಕ್ಷ ರಮೇಶ್ ಕಂಡೆಟ್ಟು ಮತ್ತಿತರರು ಉಪಸ್ಥಿತರಿದ್ದರು.