
ವಿದ್ಯಾಭಾರತಿ ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ಶಕ್ತಿ ವಿದ್ಯಾಸಂಸ್ಥೆಗೆ ಪದಕ
Friday, October 25, 2024
ಮಂಗಳೂರು: ವಿದ್ಯಾಭಾರತಿ ರಾಷ್ಟ್ರಮಟ್ಟದ ಈಜು ಸ್ಪರ್ಧೆಯು ಅಕ್ಟೋಬರ್ 1 ರಿಂದ 4ರವರೆಗೆ ಮಧ್ಯಪ್ರದೇಶದ ಮದಸ್ಸೂರ್‌ನಲ್ಲಿ ನಡೆಯಿತು.
ಈ ಸ್ಪರ್ಧೆಯಲ್ಲಿ ಶಕ್ತಿ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗ ವಿದ್ಯಾರ್ಥಿ ಸ್ಪೀವ್ ಜೆಫ್ ಲೋಬೊ 4 ಚಿನ್ನದ ಪದಕಗಳು ಹಾಗೂ ಶಕ್ತಿ ವಸತಿ ಶಾಲೆಯ ಕೀರ್ತನ್ ಬೇಕಲ್ 2 ಬೆಳ್ಳಿ ಪದಕಗಳನ್ನು ಪಡೆದು 68ನೇ ಎಸ್‌ಜಿಎಫ್‌ಐ ರಾಷ್ಟ್ರೀಯ ಮಟ್ಟದ ಈಜು ಸ್ಪರ್ಧೆಯಲ್ಲಿ ವಿದ್ಯಾಭಾರತಿ ತಂಡವನ್ನು ಪ್ರತಿನಿಧಿಸಲು ಅಯ್ಕೆಯಾಗಿರುತ್ತಾರೆ ಹಾಗೂ ವಾಣಿಜ್ಯ ವಿಭಾಗದ ಪ್ರಥಮ ಪಿ.ಯು.ಸಿ. ವಿದ್ಯಾರ್ಥಿ ಶ್ರೀವಿಷ್ಣು ಕಂಚಿನ ಪದಕವನ್ನು ಪಡೆದಿರುತ್ತಾರೆ. ಇವರಿಗೆ ಶಕ್ತಿ ವಿದ್ಯಾ ಸಂಸ್ಥೆಯ ಈಜು ತರಬೇತುದಾರ ನಾಗರಾಜ್ ಖಾರ್ವಿ ತರಬೇತಿ ನೀಡಿರುತ್ತಾರೆ.
ಈ ಸಂದರ್ಭದಲ್ಲಿ ವಿಜೇತರನ್ನು ಸಂಸ್ಥೆಯ ಸಂಸ್ಥಾಪಕ ಡಾ. ಕೆ.ಸಿ. ನಾಕ್, ಕಾರ್ಯದರ್ಶಿ ಸಂಜಿತ್ ನಾಕ್. ಪ್ರಧಾನ ಸಲಹೆಗಾರ ರಮೇಶ್ ಕೆ., ಶಕ್ತಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವೆಂಕಟೇಶ ಮೂರ್ತಿ ಮತ್ತು ಶಕ್ತಿ ವಸತಿಶಾಲೆಯ ಪ್ರಾಂಶುಪಾಲೆ ಬಬಿತಾ ಸೂರಜ್ ಅಭಿನಂದಿಸಿದ್ದಾರೆ.