ಶ್ರೀ ಮಂಗಳಾದೇವಿಗೆ ರಜತ ಹಸ್ತ ಸಮರ್ಪಣೆ
Thursday, October 3, 2024
ಮಂಗಳೂರು: ಶ್ರೀ ಮಂಗಳಾದೇವಿ ದೇವಸ್ಥಾನದ ಸೇವೆಯನ್ನೇ ಮೂಲ ಧ್ಯೆಯವನ್ನಾಗಿಸಿಕೊಂಡು ಸ್ಥಾಪನೆಯಾದಂತಹ ಶ್ರೀ ಮಂಗಳಾದೇವಿ ಸೇವಾ ಸಮಿತಿಯ ವತಿಯಿಂದ ನವರಾತ್ರಿಯ ಆರಂಭದ ದಿನವಾದ ಇಂದು ಕ್ಷೇತ್ರದ ತಂತ್ರಿ ನೀಲೇಶ್ವರ ಪದ್ಮನಾಭ ತಂತ್ರಿಯವರ ಸಮ್ಮುಖದಲ್ಲಿ ರಜತ ಹಸ್ತಗಳನ್ನು ಸಮರ್ಪಿಸಲಾಯಿತು.
ಸಮಿತಿಯ ಅಧ್ಯಕ್ಷ ದಿಲ್‌ರಾಜ್ ಆಳ್ವ ಮಾತನಾಡಿ, ನಮ್ಮ ಸಮಿತಿಯು ಅನೇಕ ವರ್ಷಗಳಿಂದ ತಾಯಿಯ ಸೇವೆಯಲ್ಲಿ ಪಾಲ್ಗೊಂಡಿದೆ. ಈ ವರ್ಷ ವಿಷೇಷವಾಗಿ ರಜತ ಹಸ್ತ ಸಮರ್ಪಣೆ ಮಾತ್ರವಲ್ಲದೆ ವಿಜಯ ದಶಮಿಯಂದು ಸಮಿತಿಯ ವತಿಯಿಂದ ಸಾರ್ವಜನಿಕ ಅನ್ನ ಸಂತರ್ಪಣೆ ನೆರವೇರಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಹಿರಿಯ ಸದಸ್ಯರಾದ ಎ. ಸೀತಾರಾಮ, ಬಿ. ಅಶೋಕ್ ಕುಮಾರ್, ಕೇಶವ, ತುಕಾರಾಮ್, ಪ್ರಧಾನ ಕಾರ್ಯದರ್ಶಿ ತಿಲಕ್ ರಾಜ್ ಕೋಶಾಧಿಕಾರಿ ವಿಶ್ವನಾಥ್, ದೇವಸ್ತಾನದ ಆಡಳಿತ ಮಂಡಳಿ ಸದಸ್ಯರು, ಅರ್ಚಕ ವೃಂದ ಮತ್ತಿತರರು ಉಪಸ್ಥಿತರಿದ್ದರು.