ಸಿದ್ದು ಸರಕಾರ ವಜಾಗೊಳಿಸಲು ರಾಷ್ಟ್ರಪತಿ ಬಳಿಗೆ ನಿಯೋಗ

ಸಿದ್ದು ಸರಕಾರ ವಜಾಗೊಳಿಸಲು ರಾಷ್ಟ್ರಪತಿ ಬಳಿಗೆ ನಿಯೋಗ

ಮಂಗಳೂರು: ಸಿದ್ದರಾಮಯ್ಯ ನೇತೃತ್ವದ ಭ್ರಷ್ಟ ರಾಜ್ಯ ಸರಕಾರವನ್ನು ವಜಾಗೊಳಿಸಲು ರಾಷ್ಟ್ರಪತಿ ಬಳಿಗೆ ಶೀಘ್ರದಲ್ಲೇ ನಿಯೋಗದ ತೆರಳಲಿರುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಬಂಟ್ವಾಳದ ಬಂಟರ ಭವನದಲ್ಲಿ ಬಿಜೆಪಿ ವತಿಯಿಂದ ಮಂಗಳವಾರ ಆಯೋಜಿಸಿರುವ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಬಿಜೆಪಿ ಕಾರ್ಯ ಕರ್ತರ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ್ದ ಸಂದರ್ಭ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

ರಾಜ್ಯದಲ್ಲಿ ವ್ಯಾಪಕವಾದ ಹಗರಣಗಳು, ಭ್ರಷ್ಟಾಚಾರಗಳು ನಡೆಯುತ್ತಿವೆ. ವಾಲ್ಮೀಕಿ ನಿಗಮದಲ್ಲಿ ಕೋಟ್ಯಂತರ ರೂ. ಹಗರಣ ನಡೆದಿದೆ. ಮುಖ್ಯಮಂತ್ರಿಯೇ ಮುಡಾ ಹಗರಣದ ಆರೋಪ ಎದುರಿಸುತ್ತಿದ್ದಾರೆ. ಅದಲ್ಲದೆ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ. ಸರಕಾರ ಜನ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರವನ್ನು ವಜಾ ಮಾಡಲು ರಾಷ್ಟ್ರಪತಿಯವರನ್ನು ಒತ್ತಾಯಿಸಲಾಗುವುದು ಎಂದರು.

ಹುಬ್ಬಳ್ಳಿಯಲ್ಲಿ ಕಲ್ಲೆಸೆತ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಪ್ರಕರಣವನ್ನು ಕೈ ಬಿಡಲು ರಾಜ್ಯ ಗೃಹ ಸಚಿವರ ನೇತೃತ್ವದ ಸಮಿತಿ ಶಿಫಾರಸು ಮಾಡಿರುವ ಪ್ರಕಾರ ಸರಕಾರ ತೀರ್ಮಾನ ಮಾಡಿರುವುದು ಅಕ್ಷಮ್ಯ ಅಪರಾಧ. ರಾಜ್ಯ ಸರಕಾರ ದೇಶದ್ರೋಹಿಗಳಿಗೆ ರಕ್ಷಣೆ ನೀಡುತ್ತಿದೆ. ಇದರ ವಿರುದ್ಧ ಬಿಜೆಪಿ ಹುಬ್ಬಳ್ಳಿಯಲ್ಲಿ ಅ.25ರಂದು ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ ಹೇಳಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article