ವೈಭವದ ‘ಮಂಗಳೂರು ದಸರಾ’ಕ್ಕೆ ಚಾಲನೆ

ವೈಭವದ ‘ಮಂಗಳೂರು ದಸರಾ’ಕ್ಕೆ ಚಾಲನೆ


ಮಂಗಳೂರು: ಮಂಗಳೂರು:ಕುದ್ರೋಳಿ ಶ್ರೀಗೋಕರ್ಣನಾಥ ದೇವಸ್ಥಾನದಲ್ಲಿ ಶ್ರೀ ಶಾರದಾ ಮೂರ್ತಿಯ ಪ್ರತಿಷ್ಠಾಪನೆಯೊಂದಿಗೆ ’ಮಂಗಳೂರು ದಸರಾ’ ಮಹೋತ್ಸವಕ್ಕೆ ಗುರುವಾರ ಚಾಲನೆ ದೊರಕಿತು. 

ಕೇಂದ್ರದ ಮಾಜಿ ಸಚಿವ,ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿಯ ರೂವಾರಿ ಬಿ. ಜನಾರ್ದನ ಪೂಜಾರಿ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದರು.

ಮಂಗಳೂರು ದಸರಾದ ವಿಶೇಷ ಆಕರ್ಷಣೆಯಾದ ಶಾರದಾ ಮಾತೆಯ ವಿಗ್ರಹವನ್ನು ದೇವಳದ ಪ್ರಾಂಗಣದಲ್ಲಿ ಪ್ರದಕ್ಷಿಣೆ ಮಾಡಿಸಿ ದರ್ಬಾರ್ ಹಾಲ್‌ನಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. 

ಮಂಗಳೂರು ದಸರಾದ ವಿಶೇಷ ಆಕರ್ಷಣೆಯಾದ ಶ್ರೀ ಶಾರದಾ ಮಾತೆಯ ವಿಗ್ರಹವನ್ನು ಮಂಗಳವಾದ್ಯಗಳೊಂದಿಗೆ ದೇವಸ್ಥಾನದ ಪ್ರಾಂಗಣದಲ್ಲಿ ಪ್ರದಕ್ಷಿಣೆ ಮಾಡಿಸಿ, ದರ್ಬಾರ್ ಸಭಾಂಗಣಕ್ಕೆ ತಂದು ಪ್ರತಿಷ್ಠಾಪಿಸಲಾಯಿತು. ಇದೇ ಸಭಾಂಗಣದಲ್ಲಿ ಶ್ರೀಮಹಾಗಣಪತಿ, ಸಿದ್ಧಿಧಾತ್ರಿ, ಮಹಾಗೌರಿ, ಮಹಾಕಾಳಿ, ಕಾತ್ಯಾಯಿನಿ, ಸ್ಕಂದಮಾತಾ, ಚಂದ್ರಘಂಟಾ, ಬ್ರಹ್ಮಚಾರಿಣಿ, ಶೈಲಪುತ್ರಿ, ಆದಿಶಕ್ತಿ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಯಿತು

ಅ.13 ರವರೆಗೆ ವಿಶೇಷ ಪೂಜೆ ಹಾಗೂ ಅಲಂಕಾರ ಸಹಿತ ಪೂಜಿಸಲಾಗುತ್ತದೆ. ಉದ್ಘಾಟನೆ ವೇಳೆ ಹುಲಿವೇಷಧಾರಿಗಳಿಂದ ಕುಣಿತ ಸೇವೆ ನಡೆಯಿತು. 9 ತಿಂಗಳ ಮಗು ಕೂಡ ಹುಲಿ ವೇಷದಲ್ಲಿ ಕಂಗೊಳಿಸಿತು.

ನವರಾತ್ರಿ ಹಾಗೂ ದಸರಾ ಮಹೋತ್ಸವದ ಅಂಗವಾಗಿ ನಗರವು ಕಳೆ ಗಟ್ಟಿದೆ. ಕುದ್ರೋಳಿ ಕ್ಷೇತ್ರದಲ್ಲಿ ವಿಶೇಷ ಅಲಂಕಾರ ಮಾಡಲಾಗಿದೆ. ದಸರಾ ಮೆರವಣಿಗೆ ಸಾಗುವ ನಗರದ ಬೀದಿಗಳಲ್ಲಿ ಮಾಡಲಾದ ವಿದ್ಯುತ್ ದೀಪಾಲಂಕಾರ ಮಂಗಳೂರು ದಸರಾ ಸಂಭ್ರಮಕ್ಕೆ ವಿಶೇಷ ಕಳೆ ತಂದಿದೆ. ಹುಲುವೇಷ ಕುಣಿತದ ತಾಸೆ ಸದ್ದು  ಬೀದಿ ಬೀದಿಗಳಲ್ಲಿ ಕಿವಿಗಪ್ಪಳಿಸುತ್ತಿದೆ.

ಅ. 13ರಂದು ಸಂಜೆ ಮೆರವಣಿಗೆ ಮೂಲಕ ಮಂಗಳೂರು ದಸರಾ ಸಮಾಪನೆಗೊಳ್ಳಲಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article