
ಭ್ರಷ್ಟಚಾರದ ವಿರುದ್ಧ ಯಾವ ಸಂದರ್ಭದಲ್ಲೂ ಲೋಕಾಯುಕ್ತಕ್ಕೆ ದೂರಿ ನೀಡಿ: ಡಾ. ಗಾನ ಪಿ. ಕುಮಾರ್
ಅವರು ಅ.24 ರಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಠಾಣೆ, ಮಂಗಳೂರು ಇವರ ಸಹಯೋಗದಲ್ಲಿ ನಗರದ ರಥಬೀದಿಯ ಡಾ. ದಯಾನಂದ ಪೈ-ಪಿ. ಸತೀಸ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಭ್ರಷ್ಟಚಾರ ವಿರುದ್ಧ ಜಾಗೃತಿ ಅರಿವು ಸಪ್ತಾಹ-2024ಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಇಡೀ ದೇಶದ ಸಾರ್ವಜನಿಕ ಕಚೇರಿಗಳಲ್ಲಿ ಉತ್ತಮ ಸೇವೆಯನ್ನು ನೀಡುವ ನಿಟ್ಟಿನಲ್ಲಿ ಕೆಲಸ ಮಾಡಲು ಲೋಕಾಯುಕ್ತ ಕಾರ್ಯ ನಿರ್ವಹಿಸುತ್ತದೆ. ಸಾರ್ವಜನಿಕ ಅಧಿಕಾರಿಗಳು ಸಾರ್ವಜನಿಕ ಸೇವೆಗಳನ್ನು ಮಾಡಬೇಕು. ಸರ್ಕಾರಿ ಅಧಿಕಾರಿಗಳು ತಮ್ಮ ಹುದ್ದೆಯನ್ನು ದುರುಪಯೋಗ ಪಡಿಸಿಕೊಂಡು ಇನ್ನೊಬ್ಬ ಅಧಿಕಾರಿಗೆ ತೊಂದರೆ ನೀಡಿದರೆ ಲೋಕಾಯುಕ್ತಕ್ಕೆ ದೂರು ನೀಡಬಹುದು ಎಂದರು.
ಅಧಿಕಾರಿ ತನ್ನ ಸ್ಥಾನವನ್ನು ಬಳಸಿಕೊಂಡು ಕಿತ್ತು ತಿನ್ನುವ ಸ್ಥಿತಿ ನಿರ್ಮಾಣ ಮಾಡಿಕೊಂಡಿದ್ದು, ಪ್ರತಿಯೊಬ್ಬರೂ ತಮ್ಮ ಕರ್ತವ್ಯವನ್ನು ಸರಿಯಾಗಿ ಮಾಡಿಕೊಂಡು ಹೋಗಬೇಕು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಜಯಕರ ಭಂಡಾರಿ ಎಂ. ಮಾತನಾಡಿ, ಯಾರೊಬ್ಬರೂ ಭ್ರಷ್ಟಚಾರಕ್ಕೆ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಭಾಗಿಯಾಗುವುದು ತಪ್ಪು. ಪ್ರತಿಯೊಬ್ಬರೂ ಭ್ರಷ್ಟಚಾರವನ್ನು ಎದುರಿಸಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಅಗ್ನಿವೀರ್ ಮತ್ತು ಪ್ಯಾರ ಕಮಾಂಡ್ ಗೆ ಆಯ್ಕೆಯಾದ ಕಾಲೇಜು ವಿದ್ಯಾರ್ಥಿ ಆಕಾಶ್ ಅವರನ್ನು ಅಭಿನಂದಿಸಲಾಯಿತು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಸುಧಾಕರನ್, ಐಕ್ಯೂಎಸಿ ಸಂಯೋಜಕ ದೇವಿಪ್ರಸಾದ್, ಲೋಕಾಯುಕ್ತ ಇನ್ಸ್‌ಪೆಕ್ಟರ್ ಗಳಾದ ಅಮಾನುಲ್ಲ, ಚಂದ್ರಶೇಖರ್, ಚಂದ್ರಶೇಖರ್ ಕೆ.ಎಲ್. ಮತ್ತಿತರರು ಉಪಸ್ಥಿತರಿದ್ದರು.
ಐಕ್ಯೂಎಸಿ ಸಹ ಸಂಯೋಜಕಿ ಡಾ. ಜೋತಿಪ್ರಿಯ ಸ್ವಾಗತಿಸಿ, ನಿರೂಪಿಸಿದರು.