ನಿರ್ವಾಹಕ ಕೊಲೆಗೈದ ಸ್ಥಿತಿಯಲ್ಲಿ ಪತ್ತೆ

ನಿರ್ವಾಹಕ ಕೊಲೆಗೈದ ಸ್ಥಿತಿಯಲ್ಲಿ ಪತ್ತೆ

ಮಂಗಳೂರು: ಸ್ಟೇಟ್‌ಬ್ಯಾಂಕ್  ಬಳಿ ಇರುವ ಇಂದಿರಾ ಕ್ಯಾಂಟೀನ್ ಪರಿಸರದಲ್ಲಿ ಖಾಸಗಿ ಬಸ್ ನಿರ್ವಾಹಕರೊಬ್ಬರ ಮೃತದೇಹ ಕೊಲೆಗೈದ ಸ್ಥಿತಿಯಲ್ಲಿ ಸೋಮವಾರ ಪತ್ತೆಯಾಗಿರುವ ಘಟನೆ ನಡೆದಿದೆ. ಮಂಗಳೂರು-ವಿಟ್ಲ ನಡುವೆ ಸಂಚರಿಸುವ ಖಾಸಗಿ ಬಸ್‌ನಲ್ಲಿ ನಿರ್ವಾಹಕರಾಗಿದ್ದ ರಾಜೇಶ್ (30) ಮೃತಪಟ್ಟವರು. ಯಾವುದೋ ವಿಚಾರಕ್ಕೆ ಗಲಾಟೆಯಾಗಿ ಅಥವಾ ಲೂಟಿ ಮಾಡುವ ಸಂದರ್ಭ ಪ್ರತಿರೋಧ ಒಡ್ಡಿರುವುದಕ್ಕೆ ದುಷ್ಕರ್ಮಿಗಳು ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. 

ಮೃತದೇಹವನ್ನು ವೆನ್ಲಾಕ್ ಶವಾಗಾರದಲ್ಲಿಡಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಪಾಂಡೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article