ದಸರಾ ರಾಜ್ಯಮಟ್ಟದ ಈಜು ಸ್ಪರ್ಧೆಗೆ ಶಕ್ತಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿ ಅಯ್ಕೆ
Tuesday, October 1, 2024
ಮಂಗಳೂರು: ಶಕ್ತಿ ಪ.ಪೂ. ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಸ್ಟೀವ್ ಜೆಫ್ ಲೋಬೊ ಇವರು ಸೆ.29 ರಂದು ಉಡುಪಿಯ ಅಜ್ಜರಕಾಡು ಈಜುಕೊಳದಲ್ಲಿ ನಡೆದಂತಹ ಮೈಸೂರು ವಿಭಾಗೀಯ ಮಟ್ಟದ ದಸರಾ ಈಜು ಸ್ಪರ್ಧೆಯಲ್ಲಿ ಭಾಗವಹಿಸಿ 2 ಚಿನ್ನದ ಪದಕಗಳನ್ನು ಪಡೆದು ಮೈಸೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದಾರೆ.
ಈ ಸಂದರ್ಭದಲ್ಲಿ ವಿಜೇತರನ್ನು ಸಂಸ್ಥೆಯ ಸಂಸ್ಥಾಪಕ ಡಾ. ಕೆ.ಸಿ. ನಾಯ್ಕ್, ಕಾರ್ಯದರ್ಶಿ ಸಂಜಿತ್ ನಾಯ್ಕ್, ಪ್ರಧಾನ ಸಲಹೆಗಾರ ರಮೇಶ್ ಕೆ. ಶಕ್ತಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವೆಂಕಟೇಶ ಮೂರ್ತಿ ಹೆಚ್ ಮತ್ತು ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆ ಬಬಿತಾ ಸೂರಜ್ ಶುಭಹಾರೈಸಿದರು.