
ಬಿಜೆಪಿ ಸಕ್ರಿಯ ಸದಸ್ಯತ್ವ ಅಭಿಯಾನ
Wednesday, October 23, 2024
ಮಂಗಳೂರು: ಸಕ್ರಿಯ ಸದಸ್ಯತ್ವ ಅಭಿಯಾನದ ಭಾಗವಾಗಿ ಭಾರತೀಯ ಜನತಾ ಪಾರ್ಟಿಯ ಸಕ್ರಿಯ ಸದಸ್ಯನಾಗಿ ಕ್ಯಾ. ಬ್ರಿಜೇಶ್ ಚೌಟ ಅವರು ತಮ್ಮ ಸದಸ್ಯತ್ವವನ್ನು ಮರು ನೋಂದಣಿ ಮಾಡಿಸಿಕೊಂಡಿದ್ದಾರೆ.
ನಗರದಲ್ಲಿರುವ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ನಡೆದ ಸಕ್ರಿಯ ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಅವರ ಸಮ್ಮುಖದಲ್ಲಿ ಕ್ಯಾ. ಚೌಟ ಅವರು ಸಕ್ರಿಯ ಸದಸ್ಯನಾಗಿ ನೋಂದಣಿ ಮಾಡಿಕೊಂಡರು.
ಸಂಸದರು ಮಾತನಾಡಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಕ್ರಿಯ ಸದಸ್ಯತಾ ಅಭಿಯಾನವನ್ನು ಪ್ರಾರಂಭಿಸುವ ಮೂಲಕ ಭಾರತೀಯ ಜನತಾ ಪಾರ್ಟಿಯ ಮೊದಲ ಸಕ್ರಿಯ ಸದಸ್ಯರಾಗಿ ತಮ್ಮ ಸದಸ್ಯತ್ವವನ್ನು ಮರು ನೋಂದಣಿ ಮಾಡಿಸಿಕೊಂಡಿದ್ದಾರೆ. ನಮ್ಮ ಪಾರ್ಟಿಯನ್ನು ತಳಮಟ್ಟದಲ್ಲಿ ಮತ್ತಷ್ಟು ಬಲಪಡಿಸಲು ಹಾಗೂ ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ವಿಕಸಿತ ಭಾರತದ ಪರಿಕಲ್ಪನೆಗೆ ವೇಗ ನೀಡುವ ನಿಟ್ಟಿನಲ್ಲಿ ಈ ಅಭಿಯಾನ ಬಹಳ ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ ಎಂದರು.
ಸಂಘಟನಾ ಪರ್ವದ ರಾಜ್ಯ ಚುನಾವಣಾಧಿಕಾರಿ ಕ್ಯಾ. ಗಣೇಶ್ ಕಾರ್ಣಿಕ್ ಮತ್ತು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಮೊದಲಾದವರು ಉಪಸ್ಥಿತರಿದ್ದರು.