ಶಾಸಕ ಕಾಮತ್ ಅವರ ನೇತೃತ್ವದಲ್ಲಿ ಪಂಚಾಯತ್ ಸದಸ್ಯರ-ಪ್ರಮುಖರ ಸಭೆ
Wednesday, October 16, 2024
ಮಂಗಳೂರು: ಅಕ್ಟೋಬರ್ 21ರಂದು ನಡೆಯಲಿರುವ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪಚುನಾವಣೆಯ ಹಿನ್ನಲೆಯಲ್ಲಿ ಮಂಗಳೂರು ವಿಧಾನಸಭಾ ಕ್ಷೇತ್ರದ (ಉಳ್ಳಾಲ) ಕೋಟೆಕಾರು ಪಟ್ಟಣ ಪಂಚಾಯತ್, ಮುನ್ನೂರು ಪಂಚಾಯತ್ ಸದಸ್ಯರ ಹಾಗೂ ಪ್ರಮುಖರ ಸಭೆಯನ್ನು ಶಾಸಕ ವೇದವ್ಯಾಸ ಕಾಮತ್ ಅವರು ನಡೆಸಿದರು.
ಈ ವೇಳೆ ಮಾತನಾಡಿದ ಶಾಸಕರು, ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿ ಅತ್ಯಂತ ಸಮರ್ಥ ಹಾಗೂ ಯುವ ನಾಯಕರಾಗಿರುವ ಕಿಶೋರ್ ಕುಮಾರ್ ಪುತ್ತೂರು ಅವರು ಕಣದಲ್ಲಿದ್ದು, ಅವರ ಗೆಲುವು ಈಗಾಗಲೇ ನಿಶ್ಚಯವಾಗಿದೆ. ಅವರು ಹೋರಾಟದ ಹಿನ್ನೆಲೆಯಿಂದ ಬಂದವರಾಗಿದ್ದು, ನಿಮ್ಮೆಲ್ಲ ಸಮಸ್ಯೆಗಳಿಗೆ ಸಮರ್ಥ ಧ್ವನಿಯಾಗ ಬಲ್ಲವರಾಗಿದ್ದಾರೆ. ಹಾಗಾಗಿ ಅವರನ್ನು ಅಭೂತಪೂರ್ವ ಅಂತರದಲ್ಲಿ ಗೆಲ್ಲಿಸಿಕೊಂಡು ಬರುವ ಮಹತ್ತರ ಜವಾಬ್ದಾರಿ ನಮ್ಮೆಲ್ಲರ ಮೇಲಿದ್ದು ಎಲ್ಲಾ ಸದಸ್ಯರು ತಮ್ಮ ಅಮೂಲ್ಯ ಮತಗಳನ್ನು ಬಿಜೆಪಿ ಅಭ್ಯರ್ಥಿಗೆ ನೀಡುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸ್ಥಳೀಯ ಬಿಜೆಪಿ ಮುಖಂಡರ ಸಹಿತ ಅನೇಕ ಪ್ರಮುಖರು ಉಪಸ್ಥಿತರಿದ್ದರು.


