ವಿಧಾನ ಪರಿಷತ್‌ಚುನಾವಣೆ ಸಿದ್ಧತೆ: ವೀಕ್ಷಕರಿಂದ ಪರಿಶೀಲನೆ

ವಿಧಾನ ಪರಿಷತ್‌ಚುನಾವಣೆ ಸಿದ್ಧತೆ: ವೀಕ್ಷಕರಿಂದ ಪರಿಶೀಲನೆ


ಮಂಗಳೂರು: ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆಯುವ ಉಪಚುನಾವಣೆಗಳ ಸಿದ್ಧತೆಗಳನ್ನು ಚುನಾವಣಾ ಆಯೋಗದ ವೀಕ್ಷಕ ಪಂಕಜ್‌ಕುಮಾರ್ ಪಾಂಡೆ ಸೋಮವಾರ ಪರಿಶೀಲಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿದ ಅವರು ಮತಗಟ್ಟೆಗಳ ಸಿದ್ಧತೆ, ಚುನಾವಣಾ ಸಿಬ್ಬಂದಿಗಳ ನೇಮಕ, ಮತ ಪತ್ರಗಳ ಮುದ್ರಣ, ಮತದಾರರ ಪಟ್ಟಿ ಹಾಗೂ ಇತರ ಚುನಾವಣೆ ಸಿದ್ಧತೆಗಳ ಮಾಹಿತಿ ಪಡೆದರು. ಮತಗಟ್ಟೆ ಸಿಬ್ಬಂದಿಗಳಿಗೆ ತರಬೇತಿ ಹಾಗೂ ಮತಎಣಿಕೆಕೇಂದ್ರದಲ್ಲಿ ಕೈಗೊಳ್ಳಬೇಕಾದ ವ್ಯವಸ್ಥೆಗಳ ಬಗ್ಗೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರುಚುನಾವಣಾ ವೀಕ್ಷಕರಿಗೆ ಸಿದ್ಧತೆಗಳ ಮಾಹಿತಿಯನ್ನು ನೀಡಿದರು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಒಟ್ಟು 392 ಮತಗಟ್ಟೆಗಳಿದ್ದು 6,032 ಮತದಾರರಿದ್ದಾರೆ. ಈ ಪೈಕಿ 3,127 ಮಹಿಳಾ ಮತದಾರರು ಹಾಗೂ 2,905 ಪುರುಷ್ ಮತದಾರರು ಇದ್ದಾರೆ ಎಂದು ಹೇಳಿದರು.

ಮತಎಣಿಕೆ ಮಂಗಳೂರಿನ ಸಂತ ಅಲೋಷಿಯಸ್ ಪದವಿ ಪೂರ್ವಕಾಲೇಜಿನಲ್ಲಿ ನಡೆಯಲಿದೆ ಎಂದು ಹೇಳಿದರು.

ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ, ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ.ಆನಂದ್ ಕೆ., ದ.ಕ. ಜಿಲ್ಲಾ ಪೊಲೀಸ್ ಅಧೀಕ್ಷಕ ಯತೀಶ್, ಉಡುಪಿ ಪೊಲೀಸ್ ಅಧೀಕ್ಷಕ ಅರುಣ್, ದ.ಕ. ಅಪರ ಜಿಲ್ಲಾಧಿಕಾರಿ ಡಾ. ಜಿ ಸಂತೋಷ್ ಕುಮಾರ್, ಉಡುಪಿ ಅಪರ ಜಿಲ್ಲಾಧಿಕಾರಿ ಮಮತಾದೇವಿ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article