
ಎಸ್.ಜೆ.ಇ.ಸಿ ಪುರುಷರ ಬಾಲ್ ಬ್ಯಾಡ್ಮಿಂಟನ್ ತಂಡ ರನ್ನರ್ ಅಪ್
Wednesday, October 30, 2024
ಮಂಗಳೂರು: ಇತ್ತೀಚೆಗೆ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ (ವಿಟಿಯು) ಮಟ್ಟದ ಕ್ರೀಡಾಕೂಟದಲ್ಲಿ ಮಂಗಳೂರಿನ ವಾಮಂಜೂರಿನ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ಕ್ರೀಡಾ ತಂಡವು ಅತ್ಯುತ್ತಮ ಪ್ರದರ್ಶನ ನೀಡಿ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ರನ್ನರ್ ಅಪ್ ಪ್ರಶಸ್ತಿ ಪಡೆದುಕೊಂಡಿದೆ.
ಎಸ್.ಜೆ.ಇ.ಸಿ ಪುರುಷರ ಬಾಲ್ ಬ್ಯಾಡ್ಮಿಂಟನ್ ತಂಡವು ಅ.26 ರಂದು ಶಿವಮೊಗ್ಗದ ಜೆ.ಎನ್.ಎನ್.ಸಿ.ಇ.ನಲ್ಲಿ ನಡೆದ ಬೆಂಗಳೂರು ಉಳಿದ ವಿಭಾಗದ ವಿಟಿಯು ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ರನ್ನರ್ ಅಪ್ ಸ್ಥಾನ ಗಳಿಸಿತು.
ವಿಶ್ವವಿದ್ಯಾನಿಲಯ ಮಟ್ಟದ ಪಂದ್ಯಾವಳಿಯಲ್ಲಿ ಈ ಅಗಾಧ ಸಾಧನೆಗಾಗಿ ಎಸ್.ಜೆ.ಇ.ಸಿ ಆಡಳಿತ ಮಂಡಳಿ, ವಿದ್ಯಾರ್ಥಿಗಳು ಮತ್ತು ದೈಹಿಕ ಶಿಕ್ಷಣ ನಿರ್ದೇಶಕರನ್ನು ಅಭಿನಂದಿಸಿದೆ. ಪಿಇಡಿ ವನೀಶಾ ವಿ. ರೋಡ್ರಿಗಸ್ ಮತ್ತು ಸಹಾಯಕ ಪಿಇಡಿ ಸುಧೀರ್ ಎಂ. ಅವರ ಮಾರ್ಗದರ್ಶನದಲ್ಲಿ ಕಾಲೇಜಿಗೆ ಪ್ರಶಸ್ತಿಗಳನ್ನು ಗೆದ್ದುಕೊಂಡಿತು.