ಎಂಎಲ್‌ಸಿ ಮಂಜುನಾಥ್ ಭಂಡಾರಿ ಅವರಿಂದ ಜಿಲ್ಲಾ ಪ್ರವಾಸ
Wednesday, October 9, 2024
ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರದ ಉಪಚುನಾವಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರು ಅ.10ರಿಂದ ಎರಡು ದಿನಗಳ ಕಾಲ ಜಿಲ್ಲೆಯ ವಿವಿಧ ಕ್ಷೇತ್ರಗಳಿಗೆ ಪ್ರವಾಸ ಕೈಗೊಂಡಿದ್ದಾರೆ.
ಅ.10 ರಂದು ಬೆಳಿಗ್ಗೆ 11 ಗಂಟೆಗೆ ಮಂಗಳೂರು (ಉಳ್ಳಾಲ) ವಿಧಾನಸಭಾ ಕ್ಷೇತ್ರ, ಮಧ್ಯಾಹ್ನ 3 ಗಂಟೆಗೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ, ಸಂಜೆ 5.30ಕ್ಕೆ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಹಾಗೂ ಅ.11 ರಂದು ಬೆಳಿಗ್ಗೆ 10 ಗಂಟೆಗೆ ಸುಳ್ಯ ವಿಧಾನಸಭಾ ಕ್ಷೇತ್ರ, ಮಧ್ಯಾಹ್ನ 2 ಗಂಟೆಗೆ ಪುತ್ತೂರು ವಿಧಾನಸಭಾ ಕ್ಷೇತ್ರ, ಸಂಜೆ 4.30ಕ್ಕೆ ಬಂಟ್ವಾಳ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡಿ ಕಾಂಗ್ರೆಸ್ ಅಭ್ಯರ್ಥಿ ಪರ ಆಯೋಜಿಸಿದ ಪ್ರಚಾರ ಸಭೆಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.