
ನಾಳೆ ‘ವಿಶ್ವವಿದ್ಯಾನಿಲಯ ಮಟ್ಟದ ಕರಾಟೆ ಪಂದ್ಯಾಟ’
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗ ಹಾಗೂ ಸ್ಕೂಲ್ ಆಫ್ ಸೋಶಿಯಲ್ ವರ್ಕ್ ರೋಶಿನಿ ನಿಲಯದ ದೈಹಿಕ ಶಿಕ್ಷಣ ವಿಭಾಗದ ಸಹಯೋಗದಲ್ಲಿ ‘ವಿಶ್ವವಿದ್ಯಾನಿಲಯ ಮಟ್ಟದ ಕರಾಟೆ ಪಂದ್ಯಾಟ’ ಅ.28 ರಂದು ಸ್ಕೂಲ್ ಆಫ್ ಸೋಶಿಯಲ್ ವರ್ಕ್ ರೋಶನಿ ನಿಲಯ ಕಾಲೇಜಿನ ಆವರಣದಲ್ಲಿ ನಡೆಯಲಿದೆ.
ಪಂದ್ಯಾಟವನ್ನು ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯ ಐವನ್ ಡಿ’ಸೋಜಾ ಉದ್ಘಾಟಿಸಲಿದ್ದಾರೆ. ಮಂಗಳೂರು ವಿಶ್ವ ವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಮತ್ತು ವಿಭಾಗ ಮುಖ್ಯಸ್ಥ ಡಾ. ಕಿಶೋರ್ ಕುಮಾರ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಮನಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಸ್ಯಾಂಡ್ರ ಸುನೀತ ಲೋಬೋ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಸಂಜೆ 5.30ಕ್ಕೆ ಸಮಾರೋಪ ಕಾರ್ಯಕ್ರಮ ನಡೆಯಲಿದ್ದು, ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯ ಭರತ್ ಕುಮಾರ್ ಸಮಾರೋಪ ಭಾಷಣ ಮಾಡಲಿದ್ದಾರೆ. ಕಾಲೇಜಿನ ಪರೀಕ್ಷಾಂಗ ಕುಲಸಚಿವ ಪ್ರೊ. ಸಿಸಿಲಿಯ ಫರಿದ ಗೋವಿಯಸ್ ಸಮಾರೋಪದ ಅಧ್ಯಕ್ಷತೆ ವಹಿಸಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಅಂತರಾಷ್ಟ್ರೀಯ ಮಟ್ಟದ ಕಬ್ಬಡಿ ತೀರ್ಪುಗಾರರು ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪ್ರೇಮನಾಥ್ ಉಳ್ಳಾಲ್, ಮಂಗಳೂರು ವಿ.ವಿ. ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ. ಜೆರಾಲ್ಡ್ ಸಂತೋಷ್ ಡಿ’ಸೋಜ, ಜಯಂತ ಕೊಂಡಾಣ, ಡಾ. ಪ್ಲಾಸಿ ರಾಯಪ್ಪನ್, ಡಾ. ಸೆಬಸ್ಟೈನ್, ಡಾ. ರೋಸಾ ನಿಮ್ಮಿ ಮತ್ತಿತರರು ಭಾಗವಹಿಸಲಿದ್ದಾರೆ. ವಿ.ವಿ. ವ್ಯಾಪ್ತಿಯ ಹಲವು ಕಾಲೇಜಿನ ಸ್ಪರ್ಧಾಳುಗಳು ಭಾಗವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.