ಮೀನುಗಾರಿಕೆಗೆ ತೆರಳದಂತೆ ಎಚ್ಚರಿಕೆ

ಮೀನುಗಾರಿಕೆಗೆ ತೆರಳದಂತೆ ಎಚ್ಚರಿಕೆ

ಮಂಗಳೂರು: ಅರಬ್ಬಿ ಸಮುದ್ರದಲ್ಲಿ  ವಾಯುಭಾರ ಕುಸಿತದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಟಿ ಜಿಟಿ ಮಳೆಯಾಗಿದೆ. ಕಳೆದ ರಾತ್ರಿ ಮಳೆಯಾಗಿದ್ದು, ಇಂದು ಮಧ್ಯಾಹ್ನ ತನಕ ಬಿಸಿಲಿನ ವಾತಾವರಣವಿತ್ತು. ಮಧ್ಯಾಹ್ನದ ಬಳಿಕ ಮೋಡ ಕವಿದ ವಾತಾವರಣವಿದ್ದು ಮಳೆಯಾಗಿದೆ. 

ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಮೀನುಗಾರರು ಮೀನುಗಾರಿಕೆಗೆ ತೆರಳದಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

ಭಾರತೀಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆಯಂತೆ, ಅ.19ರವರೆಗೆ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಭಾರಿ ಮಳೆ ಹಾಗೂ ಸಮುದ್ರ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ತುರ್ತು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಿದೆ. ಆದ್ದರಿಂದ, ಈ ದಿನಗಳಲ್ಲಿ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು ಎಂದವರು ಸೂಚಿಸಿದ್ದಾರೆ.

ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲ ಮೀನುಗಾರರು ಕೂಡಲೇ ದಡ ಸೇರುವಂತೆ ತಿಳಿಸಲಾಗಿದೆ. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ, ಸಮುದ್ರ ತೀರಕ್ಕೆ ಹೋಗದಂತೆ ಸಾರ್ವಜನಿಕರು, ಪ್ರವಾಸಿಗರು ತೆರಳದಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article