
ವಿಧಾನ ಪರಿಷತ್ತು ನೂತನ ಸದಸ್ಯರಾಗಿ ಕಿಶೋರ್ ಕುಮಾರ್ ಪುತ್ತೂರು ಪ್ರಮಾಣ ವಚನ
Wednesday, October 30, 2024
ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರದಿಂದ ವಿಧಾನ ಪರಿಷತ್‌ಗೆ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಕಿಶೋರ್ ಕುಮಾರ್ ಪುತ್ತೂರು ಪ್ರಮಾಣ ವಚನ ಸ್ವೀಕರಿಸಿದರು. ವಿಧಾನ ಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ ಪ್ರತಿಜ್ಞಾ ವಿಧಿ ಬೋಧಿಸಿದರು.
ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಹರೀಶ್ ಪೂಂಜಾ, ಭಾಗೀರಥಿ ಮುರುಳ್ಯ ಶುಭ ಹಾರೈಸಿದರು.