
ವಿದ್ಯಾ ಎಸ್. ಅವರಿಗೆ ಡಾಕ್ಟರೇಟ್ ಪದವಿ
Wednesday, October 2, 2024
ಮಂಗಳೂರು: ಮಂಗಳೂರು ನಿವಾಸಿ, ಪುತ್ತೂರು ವಿವೇಕಾನಂದ ಕಾಲೇಜಿನ ಸಮಾಜಶಾಸ್ತ್ರ ವಿಭಾಗ ಮುಖ್ಯಸ್ಥೆ ವಿದ್ಯಾ ಎಸ್. ಸಲ್ಲಿಸಿದ ಸಂಶೋಧನಾ ಪ್ರಬಂಧಕ್ಕೆ ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ.
ಅವರು ಕುವೆಂಪು ವಿಶ್ವವಿದ್ಯಾಲಯದ ಕಲಾ ವಿಭಾಗದ ಡೀನ್ ಮತ್ತು ಸಮಾಜಶಾಸ್ತ್ರ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನಾ ವಿಭಾಗ ಮುಖ್ಯಸ್ಥ ಪ್ರೊ. ಡಾ. ಗುರುಲಿಂಗಯ್ಯ ಮಾರ್ಗದರ್ಶನದಲ್ಲಿ ‘ಕರ್ನಾಟಕದ ಹವ್ಯಕ ಸಮುದಾಯ: ಒಂದು ಸಮಾಜಶಾಸ್ತ್ರೀಯ ಅಧ್ಯಯನ’ ಕುರಿತು ಪ್ರಬಂಧ ಮಂಡಿಸಿದ್ದರು.
ವಿದ್ಯಾ 14 ವರ್ಷಗಳಿಂದ ಪುತ್ತೂರು ವಿವೇಕಾನಂದ ಸ್ವಾಯತ್ತ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕಿ ಹಾಗೂ ವಿಭಾಗ ಮುಖ್ಯಸ್ಥೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹಲವು ವರ್ಷಗಳಿಂದ ಮಂಗಳೂರು ಆಕಾಶವಾಣಿಯಲ್ಲಿ ತಾತ್ಕಾಲಿಕ ನಿರೂಪಕಿಯಾಗಿದ್ದಾರೆ. ಸುಳ್ಯ ತಾಲೂಕು ಬಾಳುಗೋಡು ಗ್ರಾಮ ಮಾನಡ್ಕದ ಶೇಡಿಗುಮ್ಮೆ ಪುರುಷೋತ್ತಮ ಭಟ್-ಇಂದಿರಾ ದಂಪತಿ ಪುತ್ರಿ.