ಕರಾವಳಿಯಲ್ಲಿ ಮುಂದುವರಿದ ಮಳೆ: ಯೆಲ್ಲೋ ಅಲರ್ಟ್ ಘೋಷಣೆ

ಕರಾವಳಿಯಲ್ಲಿ ಮುಂದುವರಿದ ಮಳೆ: ಯೆಲ್ಲೋ ಅಲರ್ಟ್ ಘೋಷಣೆ

ಮಂಗಳೂರು: ಕರಾವಳಿಯಲ್ಲಿ ಬುಧವಾರ ಅಪರಾಹ್ನ ಹಗುರದಿಂದ ಸಾಧಾರಣ ಮಳೆ ಸುರಿಯುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಅ.17 ಮತ್ತು 18 ರಂದು ಕರಾವಳಿಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ. 

ದ.ಕ. ಜಿಲ್ಲಾಡಳಿತ ಕೂಡ ಅ.19ರ ವರೆಗೆ ಭಾರಿ ಮಳೆಯ ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಕಟ್ಟೆಚ್ಚರದಿಂದ ಇರುವಂತೆ ಮೀನುಗಾರರಿಗೆ ಸೂಚಿಸಿದೆ.

ದ.ಕ.ಜಿಲ್ಲೆಯಲ್ಲಿ ಬುಧವಾರ ಮಧ್ಯಾಹ್ನ ವರೆಗೆ ಮೋಡ ಮುಸುಕಿದ ವಾತಾವರಣ, ಅಲ್ಲಲ್ಲಿ ತುಂತುರು ಮಳೆ ಸುರಿದಿತ್ತು. ಮಂಗಳೂರು ಸೇರಿದಂತೆ ಗ್ರಾಮೀಣ ಭಾಗಗಳಲಿ  ಅಪರಾಹ್ನ ಗುಡುಗು ಸಹಿತ ಮಳೆಯಾಗಿದೆ. ಜಿಲ್ಲೆಯಾದ್ಯಂತ ಇಡೀ ದಿನ ಮಳೆಯ ವಾತಾವರಣ ಜೊತೆಗೆ ತಂಪಗಿನ ಹವಾಮಾನ ಕಂಡುಬಂದಿತ್ತು. 

ಕಳೆದ ಎರಡು ದಿನಗಳಿಂದ ಆಗಾಗ ಸುರಿಯುತ್ತಿರುವ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯ ಮಾಣಿ, ಕಲ್ಲಡ್ಕ, ಬಿ.ಸಿ.ರೋಡ್-ಗುರುವಾಯನಕೆರೆ ಹೆದ್ದಾರಿಯ ಕಾಮಗಾರಿ  ಸ್ಥಳಗಳಲ್ಲಿ ಹೊಂಡಗುಂಡಿ ಕಾಣಿಸಿದ್ದು, ವಾಹನ ಸಂಚಾರ ದುಸ್ತರವಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article