
ಬಿಜೆಪಿ ಸದಸ್ಯತನ ನೋಂದಾವಣೆ ಎರಡನೇ ಹಂತದ ಅಭಿಯಾನಕ್ಕೆ ಚಾಲನೆ
Wednesday, October 2, 2024
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಸದಸ್ಯತನ ನೋಂದಾವಣೆಯ ಎರಡನೇ ಹಂತದ ಅಭಿಯಾನಕ್ಕೆ ಮಂಗಳೂರಿನಲ್ಲಿ ರಾಜ್ಯ ಬಿಜೆಪಿ ಕಾರ್ಯದರ್ಶಿ, ಸಂಸದ ಕ್ಯಾ. ಬ್ರಿಜೇಶ್ ಚೌಟ ಚಾಲನೆ ನೀಡಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಅಭಿಯಾನದ ರೂಪುರೇಷೆಯನ್ನು ವಿವರಿಸಿದರು.
ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ರವೀಂದ್ರ ಶೆಟ್ಟಿ ಉಳಿದೊಟ್ಟು, ಪೂಜಾ ಪೈ, ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಯತೀಶ್ ಆರ್ವಾರ, ಪ್ರಮುಖರಾದ ನಿತಿನ್ ಕುಮಾರ್, ಸುಧೀರ್ ಶೆಟ್ಟಿ ಕಣ್ಣೂರು, ರಾಜಗೋಪಾಲ್ ರೈ, ಮಂಗಳೂರು ಮಹಾನಗರ ಪಾಲಿಕೆ ಉಪ ಮೇಯರ್ ಭಾನುಮತಿ, ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಡಾ. ಮಂಜುಳಾ ರಾವ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ಮಹೇಶ್ ಜೋಗಿ, ಜಿಲ್ಲಾ ಬಿಜೆಪಿಯ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಪ್ರಮುಖರು, ವಿವಿಧ ಮಂಡಲಗಳ ಅಧ್ಯಕ್ಷ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರಾಕೇಶ್ ರೈ ಕೆಡೆಂಜಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ಸಾರ್ವಜನಿಕವಾಗಿ ಬಿಜೆಪಿ ಸದಸ್ಯತನ ನೋಂದಾವಣೆಯನ್ನು ನಡೆಸಲಾಯಿತು.