ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ಶಾರದ ಪೂಜೆ ಮತ್ತು ಆಯುಧ ಪೂಜೆ
Saturday, October 12, 2024
ಮಂಗಳೂರು: ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆ, ಶಕ್ತಿ ಪದವಿ ಪೂರ್ವ ಕಾಲೇಜು ಮತ್ತು ಶಕ್ತಿ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಶಾರದ ಪೂಜೆ ಹಾಗೂ ಆಯುಧ ಪೂಜೆ ನಡೆಯಿತು.
ಸಂಸ್ಥೆಯ ಎಲ್ಲಾ ಶಾಲಾ ಬಸ್ ಸೇರಿದಂತೆ ಸಿಬ್ಬಂದಿ ವರ್ಗದವರ ವಾಹನಗಳಿಗೆ ಆಯುಧ ಪೂಜೆ ನೆರವೇರಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ಡಾ. ಕೆ.ಸಿ. ನಾಕ್, ಆಡಳಿತ ಮಂಡಳಿ ಟ್ರಸ್ಟಿ ಸಗುಣ ಸಿ. ನಾಕ್, ಪ್ರಧಾನ ಸಲಹೆಗಾರ ರಮೇಶ ಕೆ., ಶಕ್ತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವೆಂಕಟೇಶ ಮೂರ್ತಿ ಹೆಚ್., ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆ ಬಬಿತ ಸೂರಜ್, ಶಿಕ್ಷಕ-ಶಿಕ್ಷಕೇತರ ವೃಂದ ಉಪಸ್ಥಿತರಿದ್ದರು.







