
ಸರಕಾರಿ ಕಾಲೇಜಿನ ಪ್ರಥಮ ಪದವಿ ವಿದ್ಯಾರ್ಥಿನಿ ಮೃತ್ಯು
Sunday, October 27, 2024
ಮಂಜೇಶ್ವರ: ಇಲ್ಲಿನ ಮಂಜೇಶ್ವರ ಗೋವಿಂದ ಪೈ ಸರಕಾರಿ ಕಾಲೇಜಿನ ಪ್ರಥಮ ಪದವಿ ತರಗತಿ ವಿದ್ಯಾರ್ಥಿನಿ ಮುಗು ರೋಡಿನ ಮುಹಮ್ಮದ್-ಪೌಸಿಯ ದಂಪತಿಗಳ ಪುತ್ರಿ ತ್ವಯಿಬಾ (18) ಅಸೌಖ್ಯದಿಂದ ಮೃತಪಟ್ಟ ಘಟನೆ ಇಂದು ನಡೆದಿದೆ.
ಇವರು ಗೋವಿಂದ ಪೈ ಸರಕಾರಿ ಕಾಲೇಜಿನ ಪ್ರಥಮ ವರ್ಷ ಬಿಟಿಟಿಎಂ ವಿದ್ಯಾರ್ಥಿನಿಯಾದ್ದಳು. ಕಳೆದ ಹಲವು ದಿನಗಳಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಂದು ರಾತ್ರಿ ಮೃತಪಟ್ಟಿದ್ದು, ವಿದ್ಯಾರ್ಥಿನಿಯ ಆಕಾಲಿಕ ಮರಣಕ್ಕೆ ಮಂಜೇಶ್ವರ ಗೋವಿಂದ ಪೈ ಸರಕಾರಿ ಕಾಲೇಜಿನ ಪ್ರಾಚಾರ್ಯ ಮುಹಮ್ಮದ್ ಅಲಿ ಪೆರ್ಲ, ಸಿನಿಯರ್ ಸುಪ್ರಡೆಂಟ್ ದಿನೇಶ್, ಕಾಲೇಜಿನ HOD, ಉಪನ್ಯಾಸಕರು, ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಸಂತಾಪವನ್ನು ಸೂಚಿಸಿದ್ದಾರೆ.