
ಮೂಡುಬಿದಿರೆ ತಾಲೂಕಿನ ಮೂವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
Thursday, October 31, 2024
ಮೂಡುಬಿದಿರೆ: ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಮೂಡುಬಿದಿರೆ ತಾಲೂಕಿನ ಮೂವರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದೆ.
ಶಿಕ್ಷಣ ಕ್ಷೇತ್ರದ ಪ್ರವರ್ಧನೆಗಾಗಿ ಮೂಡುಬಿದಿರೆ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ರಶ್ಮಿತಾ ಜೈನ್ ಸಹಿತ ಕಂಬಳ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಇರುವೈಲು ಪಾಣಿಲ ಸತೀಶ್ಚಂದ್ರ ಸಾಲ್ಯಾನ್ ಅವರಿಗೆ ಹಾಗೂ ಕಲಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಮಾಂಟ್ರಾಡಿ ನಾರಾಯಣ ಪರವರಿಗೆ ಪ್ರಶಸ್ತಿ ಬಂದಿದೆ.
ದಕ್ಷಿಣ ಕನ್ನಡ ಜಿಲ್ಲೆಯ 55 ಮಂದಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಲಾಗಿದೆ. ಜಿಲ್ಲೆಯ 20 ಸಂಘ ಸಂಸ್ಥೆಗಳಿಗೆ ಪ್ರಶಸ್ತಿ ಘೋಷಣೆಯಾಗಿದೆ.