ವಿದ್ಯುತ್ ಗುತ್ತಿಗೆದಾರ ಗಣೇಶ್ ರಾವ್ ನಿಧನ

ವಿದ್ಯುತ್ ಗುತ್ತಿಗೆದಾರ ಗಣೇಶ್ ರಾವ್ ನಿಧನ


ಮೂಡುಬಿದಿರೆ: ಇಲ್ಲಿನ ಶ್ರೀ ಕೃಷ್ಣ ಫ್ರೆಂಡ್ಸ್ ಸರ್ಕಲ್‌ನ ಗೌರವಾಧ್ಯಕ್ಷ, ವಿದ್ಯುತ್ ಗುತ್ತಿಗೆದಾರ ಗಣೇಶ್ ರಾವ್ (57) ಅವರು ಹೃದಯಾಘಾತಕ್ಕೊಳಗಾಗಿ ಶನಿವಾರ ರಾತ್ರಿ ನಿಧನ ಹೊಂದಿದರು.

ಪ್ರಾಂತ್ಯ ಗಾಮದ ವಿಶಾಲ್ ನಗರ ನಿವಾಸಿಯಾಗಿರುವ ಗಣೇಶ್ ರಾವ್ ಅವರು ಮೂಡುಬಿದಿರೆಯಲ್ಲಿ ಹಲವು ವರ್ಷಗಳಿಂದ ವಿದ್ಯುತ್ ಗುತ್ತಿಗೆದಾರರಾಗಿ ದುಡಿಯುತ್ತಿದ್ದರು. ಅಲ್ಲದೆ ಶ್ರೀ ಕೃಷ್ಣ ಫ್ರೆಂಡ್ಸ್ ಸರ್ಕಲ್‌ನ ಸ್ಥಾಪಕ ಸದಸ್ಯರಾಗಿದ್ದ ಅವರು 20 ವರ್ಷಗಳ ಕಾಲ ಅಧ್ಯಕ್ಷರಾಗಿ ಹಾಗೂ ಎರಡು ಅವಧಿಗೆ ಗೌರವಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಪತ್ನಿ, ಓರ್ವ ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article