
ದ.ಕ. ಜಿಲ್ಲೆಯ ರಾಯಿ ರಾಜಕುಮಾರ, ಮೂಡುಬಿದಿರೆ ಹಾಗೂ ಬೆಳ್ತಂಗಡಿಯ ಅಕ್ಕಮ್ಮರಿಗೆ ರಾಜ್ಯ ಶಿಕ್ಷಕ ರತ್ನ ಪ್ರಶಸ್ತಿ
Thursday, October 17, 2024
ಮೂಡುಬಿದಿರೆ: ಬೆಂಗಳೂರಿನ ಸೂರ್ಯ ಫೌಂಡೇಶನ್ (ರಿ), ಸ್ಪಾರ್ಕ್ ಅಕಾಡೆಮಿ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ತು (ರಿ) ಮೈಸೂರು ಇವರ ಸಂಯುಕ್ತ ಆಶ್ರಯದಲ್ಲಿ ಬೆಂಗಳೂರಿನ ಇಂಡೋಗ್ಲೋಬ್ ಕಾಲೇಜಿನಲ್ಲಿ ರಾಜ್ಯ ಮಟ್ಟದ ಶೈಕ್ಷಣಿಕ ಸಮ್ಮೇಳನ ಅಕ್ಟೋಬರ್ 15 ಹಾಗೂ 16 ರಂದು ನಡೆಯಿತು.
ದ.ಕ. ಜಿಲ್ಲೆಯಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಿ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸೂಕ್ತ ಮಾರ್ಗದರ್ಶನ ನೀಡಿದ ಹಾಗೂ ಸ್ವತಃ ಉತ್ತಮ ಸಾಧಕರಾಗಿ, ಶಿಷ್ಟ ಶಿಕ್ಷಕರಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿದ ಮೂಡುಬಿದಿರೆ ತಾಲೂಕಿನ ರಾಯಿ ರಾಜಕುಮಾರ ಹಾಗೂ ಬೆಳ್ತಂಗಡಿಯ ಅಕ್ಕಮ್ಮ ರವರ ಅನುಪಮ ಸೇವೆಯನ್ನು ಪರಿಗಣಿಸಿ ಬೆಂಗಳೂರು ಇಂಡೋಗ್ಲೋಬ್ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ನಡೆದ 2024 ನೇ ರಾಜ್ಯ ಮಟ್ಟದ ಶೈಕ್ಷಣಿಕ ಸಮ್ಮೇಳನದಲ್ಲಿ ರಾಜ್ಯ ಮಟ್ಟದ ಶಿಕ್ಷಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.