ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Sunday, October 6, 2024
ಮುಲ್ಕಿ: ಕಿನ್ನಿಗೋಳಿ ಸಮೀಪದ ಐಕಳ ನೆಲ್ಲಿಗುಡ್ಡೆ ಎಂಬಲ್ಲಿ ಮಹಿಳೆಯೋಬ್ಬರು ಭಾನುವಾರ ಮಧ್ಯಾಹ್ನ ಏಕಾಏಕಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತ ಮಹಿಳೆಯನ್ನು ಉತ್ತರ ಕರ್ನಾಟಕ ಬಾದಾಮಿ ಕೆರೂರು ಗುಬೇರಕೊಪ್ಪ ಮೂಲದ ಕಿನ್ನಿಗೋಳಿ ಐಕಳ ಪಾದೆ ಕೋರೆ ಬಳಿಯ ಬಾಡಿಗೆ ಮನೆಯಲ್ಲಿ ವಾಸ್ತವ್ಯವಿದ್ದ ಸುನೀತಾ (31) ಎಂದು ಗುರುತಿಸಲಾಗಿದೆ.
ಮೃತ ಮಹಿಳೆ ಸುನೀತ ಭಾನುವಾರ ಮಧ್ಯಾಹ್ನದವರೆಗೆ ಮನೆಯಲ್ಲಿ ಇದ್ದು ಬಳಿಕ ಏಕಾಏಕಿ ನಾಪತ್ತೆಯಾಗಿದ್ದರು. ಈ ಸಂದರ್ಭ ಸ್ಥಳೀಯರು ಪರಿಸರದಲ್ಲಿ ಹುಡುಕಾಡಿದ್ದು ಬಳಿಕ ಬಾಡಿಗೆ ಮನೆಯ ಬಾವಿಯಲ್ಲಿ ಮೃತ ದೇಹ ಪತ್ತೆಯಾಗಿದೆ.
ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಮೃತ ದೇಹವನ್ನು ಮೇಲಕ್ಕೆ ಎತ್ತಲಾಗಿದೆ. ಮುಲ್ಕಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು ಪ್ರಕರಣ ದಾಖಲಿಸಿದ್ದಾರೆ. ಮೃತ ಸುನಿತಾ ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.