ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ: ಸ್ಥಳೀಯರಿಂದ ರಕ್ಷಣೆ
Monday, October 7, 2024
ಮುಲ್ಕಿ: ಚಲಿಸುತ್ತಿದ್ದ ಕಾರು ಏಕಾಏಕಿ ಬೆಂಕಿ ಹತ್ತಿಕೊಂಡು ಉಳಿದ ಘಟನೆ ಮಂಗಳೂರಿಗೆ ಹೊರವಲಯದ ಕಿನ್ನಿಗೋಳಿ ಪೇಟೆಯಲ್ಲಿ ಇಂದು ಸಂಭವಿಸಿದೆ. ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.
ಕಾರೊಂದಕ್ಕೆ ಆಕಸ್ಮತ್ ಬೆಂಕಿ ತಗುಲಿಗಿದ ಘಟನೆ ಕಿನ್ನಿಗೋಳಿ ಮುಖ್ಯ ರಸ್ತೆಯ ಮಾರುಕಟ್ಟೆಮುಂಭಾಗ ನಡೆದಿದೆ. ಕಿನ್ನಿಗೋಳಿ ಸಮೀಪದ ದಾಮಸ್ಕಟ್ಟೆ ನಿವಾಸಿ ಜಾಸ್ಮಿನ್ ಅವರು ಮತ್ತೊರ್ವ ಮಹಿಳೆ ಮತ್ತು ಎರಡು ಮಕ್ಕಳೊಂದಿಗೆ ಕಿನ್ನಿಗೋಳಿ ಮಾರುಕಟ್ಟೆ ಮುಂಭಾಗ ಕಾರು ನಿಲ್ಲಿಸಿ ಹೋದ ಸಂದರ್ಭ ಕಾರಿನಲ್ಲಿ ಹೊಗೆ ಬರಲಾರಂಭಿಸಿದೆ. ಕಾರಿನಲ್ಲಿದ್ದ ಮಹಿಳೆ ಮತ್ತು ಎರಡು ಮಕ್ಕಳು ಬೊಬ್ಬೆ ಹಾಕಿದ್ದು ಕೂಡಲೇ ಸ್ಥಳೀಯರು ಸೇರಿ ಕಾರಿನಲ್ಲಿದ್ದವರನ್ನು ಅಪಾಯದಿಂದ ಪಾರುಮಾಡಿದ್ದಾರೆ.
ಸ್ಥಳಿಯ ಅಂಗಡಿ ಮಾಲಿಕ ರಾಘವೇಂದ್ರ ಪ್ರಭು ಸ್ಥಳೀಯ ಪ್ರೆಟ್ರೋಲ್ ಪಂಪ್ ನಿಂದ ಅಗ್ನಿ ಶಮನದ ಸಾಧನದ ಮೂಲಕ, ಸ್ಥಳಿಯರೊಂದಿಗೆ ಸೇರಿ ಬೆಂಕಿ ನಂದಿಸಿದ್ದಾರೆ. ಕಾರು ಸಂಪೂರ್ಣ ಸುಟ್ಟು ಹೋಗಿದ್ದರಿಂದ ಲಕ್ಷಾಂತರ ರೂಪಾಯಿಗಳ ನಷ್ಟ ಸಂಭವಿಸಿದೆ.
