ಕಿನ್ನಿಗೋಳಿ ದಾಮಸ್ ಕಟ್ಟೆ ಅಪರಿಚಿತ ಗಂಡಸಿನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ
Monday, October 7, 2024
ಮುಲ್ಕಿ: ಕಿನ್ನಿಗೋಳಿ ಸಮೀಪದ ದಾಮಸ್ ಕಟ್ಟೆ ಬಾರ್ ಬಳಿಯ ಸುನಿಲ್ ಪಿರೇರಾ ಎಂಬವರ ಖಾಲಿ ಜಾಗದಲ್ಲಿ 50-55 ವರ್ಷ ಪ್ರಾಯದ ಗಂಡಸಿನ ಮೃತ ದೇಹ ಪತ್ತೆಯಾಗಿದೆ
ಮೃತ ದೇಹ ಕೊಳೆತು ದುರ್ವಾಸನೆ ಬೀರುತ್ತಿದ್ದು ವ್ಯಕ್ತಿ ಮೃತಪಟ್ಟು ಸುಮಾರು ಹತ್ತರಿಂದ ಹದಿನೈದು ದಿನಗಳಾಗಿರಬಹುದು ಎಂದು ಶಂಕಿಸಲಾಗಿದೆ
ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ವಾರಿಸುದಾರರು ಇದ್ದರೆ ಮುಲ್ಕಿ ಪೊಲೀಸ್ ಠಾಣೆಯನ್ನು ಸಂಪರ್ಕಿಸಲು ಕೋರಲಾಗಿದೆ.