ಪ್ರಪಾತಕ್ಕೆ ಉರುಳಿದ ಬಸ್: ಚಾಲಕ ಮೃತ್ಯು

ಪ್ರಪಾತಕ್ಕೆ ಉರುಳಿದ ಬಸ್: ಚಾಲಕ ಮೃತ್ಯು

ನೆಲ್ಯಾಡಿ: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿಬಿದ್ದ ಘಟನೆ ಉದನೆ ಸಮೀಪದ ಎಂಜಿರ ಎಂಬಲ್ಲಿ ಇಂದು ನಸುಕಿನ ವೇಳೆ ಸಂಭವಿಸಿದ್ದು, ಘಟನೆಯಲ್ಲಿ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಮೃತ ಬಸ್ ಚಾಲಕರನ್ನು ಭರತ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಬಸ್ ನಿರ್ವಾಹಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಅಪಘಾತದ ವೇಳೆ ಬಸ್ಸಿನಲ್ಲಿ ಚಾಲಕ ಮತ್ತು ನಿರ್ವಾಹಕ ಮಾತ್ರ ಇದ್ದರೆನ್ನಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article