
ವಿದ್ಯಾಭಾರತಿ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟ: ವಿವೇಕಾನಂದ ಪದವಿಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿನಿಯರು ಎಸ್.ಜಿ.ಎಫ್.ಐ.ಗೆ ಆಯ್ಕೆ
Tuesday, October 22, 2024
ಪುತ್ತೂರು: ವಿದ್ಯಾಭಾರತಿ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟವು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು.
ದಕ್ಷಿಣ ಮಧ್ಯ ಕ್ಷೇತ್ರವನ್ನು ಪ್ರತಿನಿಧಿಸಿದ ವಿವೇಕಾನಂದ ವಿದ್ಯಾಸಂಸ್ಥೆ ಮುಂಡಾಜೆಯ ತಂಡದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ನಿಶಾ, ಬಿಂದು, ವರ್ಣಿಕಾ ಗೌಡ ಇವರು ಪಾಲ್ಗೊಂಡಿದ್ದು, ತಂಡವು ಪ್ರಥಮ ಸ್ಥಾನವನ್ನು ಪಡೆದು ಎಸ್.ಜಿ.ಎಫ್.ಐ.ಯ ರಾಷ್ಟ್ರಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತದೆ.
ವಿದ್ಯಾರ್ಥಿನಿಯರು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರುಗಳಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ಮಾರ್ಗದರ್ಶನವನ್ನು ಪಡೆದಿರುತ್ತಾರೆ.
ಇವರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಅಭಿನಂದಿಸಿದ್ದಾರೆ.