
ಶುದ್ಧ ಮನಸ್ಸಿನಿಂದ ಕೆಲಸ ಮಾಡಿದರೆ ದೇಶದ ಅಭಿವೃದ್ಧಿ: ವಂ. ಡಾ. ಆಂಟನಿ ಪ್ರಕಾಶ್ ಮೊಂತೇರೊ
Tuesday, October 29, 2024
ಪುತ್ತೂರು: ‘ಭ್ರಷ್ಟಾಚಾರವು ದೇಶದ ಮೂಲೆ ಮೂಲೆಯಲ್ಲಿ ಮಾತ್ರವಲ್ಲ, ಮನುಷ್ಯನ ಮನಸ್ಸಿನಲ್ಲೂ ತುಂಬಿದೆ. ವಿದ್ಯಾರ್ಥಿಗಳು ತಮ್ಮ ಯೋಚನೆಗಳನ್ನು ಹಾಗೂ ಕಾರ್ಯಗಳನ್ನು ಶ್ರದ್ಧೆ, ನಿಷ್ಠೆ ಮತ್ತು ಶುದ್ಧ ಮನಸ್ಸಿನಿಂದ ಮಾಡುವುದುದರಿಂದ ದೇಶವು ಅಭಿವೃದ್ಧಿ ಹೊಂದುವುದು ಸಾಧ್ಯ ಎಂದು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಪ್ರಾಂಶುಪಾಲ ವಂ. ಡಾ. ಆಂಟನಿ ಪ್ರಕಾಶ್ ಮೊಂತೇರೊ ಅವರು ಹೇಳಿದರು.
ಅವರು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ ಎನ್ಎಸ್ಎಸ್ ಘಟಕವು ಭ್ರಷ್ಟಾಚಾರ ನಿರ್ಮೂಲನೆಯ ಅಂಗವಾಗಿ ಆಯೋಜಿಸಿದ ‘ಜಾಗೃತಿ ಅರಿವು ಸಪ್ತಾಹ’ದ ಅಧ್ಯಕತೆ ವಹಿಸಿ ಮಾತನಾಡಿದರು
ಇದೇ ಸಂದರ್ಭದಲ್ಲಿ ಪ್ರಾಂಶುಪಾಲರು ಪ್ರತಿಜ್ಞಾವಿಧಿಯನ್ನು ಬೋದಿಸಿದರು.
ಎನ್ಎಸ್ಎಸ್ ಅಧಿಕಾರಿ ಡಾ. ಚಂದ್ರಶೇಖರ ಕೆ. ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು. ಎನ್ಎಸ್ಎಸ್ ಅಧಿಕಾರಿ ಪುಷ್ಪ ಎನ್. ಮತ್ತು ಕಾಲೇಜಿನ ಸಾರ್ವಜನಿಕ ಸಂಪರ್ಕಾಧಿಕಾರಿ ಭಾರತಿ ಎಸ್. ರೈ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಎನ್ಎಸ್ಎಸ್ ಘಟಕ ನಾಯಕರಾದ ಕೆವಿನ್ ನಿರೂಪಿಸಿ, ಪೂರ್ಣಶ್ರೀ ಮತ್ತು ತಂಡದವರು ಪ್ರಾರ್ಥಿಸಿ, ವಿಷ್ಣುಜಿತ್ ವಂದಿಸಿದರು.