ಕಾಲೇಜು ವಿದ್ಯಾರ್ಥಿ ನಾಪತ್ತೆ

ಕಾಲೇಜು ವಿದ್ಯಾರ್ಥಿ ನಾಪತ್ತೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನಲ್ಲಿ ದ್ವಿತೀಯ ಬಿಎಸ್ಸಿ ಕಲಿಯುತ್ತಿರುವ ವಿದ್ಯಾರ್ಥಿಯೊಬ್ಬ ತನ್ನ ಸ್ನೇಹಿತನನ್ನು ನೋಡಿಬರುವುದಾಗಿ ಮನೆಯಲ್ಲಿ ಹೋದವನು ಕಳೆದ 3 ದಿನಗಳಿಂದ ನಾಪತ್ತೆಯಾಗಿದ್ದಾನೆ ಎಂದು ಪುತ್ತೂರು ನಗರಠಾಣೆಯಲ್ಲಿ ದೂರು ದಾಖಲಾಗಿದೆ. 

ಪುತ್ತೂರು ಹೊರವಲಯದ ನೆಹರೂನಗರದ ಗಣೇಶ್‌ಬಾಗ್ ಲಕ್ಷ್ಮೀ ಪ್ರಸಾದ್ ಕಂಪೌಂಡಿನ ನಿವಾಸಿ ದಿ.ಕೇಶವ ಮೂರ್ತಿ ಎಂಬವರ ಪುತ್ರ ಮನೋಜ್ ಕೆ (20) ನಾಪತ್ತೆಯಾದ ವಿದ್ಯಾರ್ಥಿ. ಈತ ಅ.5 ರಂದು ಮುಂಜಾನೆ ಮನೆಯಿಂದ ಹೋಗಿದ್ದು, ಈತನಕ ಮನೆಗೆ ಬಂದಿಲ್ಲ. ಈತನ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದೆ ಎಂದು ಪ್ರಪುಲ್ಲ ಸ್ವಾಮಿ ಎಂಬವರು ನಗರಠಾಣೆಯ ಪೊಲೀಸರಿಗೆ ದೂರು ನೀಡಿದ್ದಾರೆ. 

ಕನ್ನಡ ತುಳು ಹಾಗೂ ಇಂಗ್ಲೀಷ್ ಭಾಷೆಯಲ್ಲಿ ಮಾತನಾಡುವ ಸಾಮರ್ಥ್ಯ ಹೊಂದಿದ್ದು, ಈತನ ಬಗ್ಗೆ ಮಾಹಿತಿ ದೊರಕಿದಲ್ಲಿ ನಗರಠಾಣೆಗೆ ಮಾಹಿತಿ ನೀಡುವಂತೆ ಠಾಣಾಧಿಕಾರಿ ವಿನಂತಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article