ಠಾಣೆಯಿಂದ ಪೊಲೀಸರಿಗೆ ಚಳ್ಳೆಹಣ್ಣು ತಿಳಿಸಿ ಪರಾರಿಯಾದ ಆರೋಪಿ
Saturday, October 5, 2024
ಸುಳ್ಯ: ಸ್ಟೇಷನಿಗೆ ಕರೆ ತಂದ ಆರೋಪಿ ಪೋಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾದ ಘಟನೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಇಂದು ನಡೆದಿದೆ.
ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ಠಾಣೆಗೆ ಕರೆ ತಂದಿದ್ದರು. ಆದರೆ ಆರೋಪಿ ಪೋಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾಗಿದ್ದಾನೆ.
ಸುಳ್ಯ ಪೋಲೀಸ್ ಠಾಣೆಯ ಪ್ರಕರಣವೊಂದರ ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೆ ಹಲವು ತಿಂಗಳ ಕಾಲ ತಲೆಮರೆಸಿಕೊಂಡಿದ್ದ.ಇಂದು ಮಧ್ಯಾಹ್ನ ಆರೋಪಿಯನ್ನು ಬಂಧಿಸಿ ಠಾಣೆಗೆ ಕರೆ ತಂದಿದ್ದರು. ಬಳಿಕ ವೈದ್ಯಕೀಯ ತಪಾಸಣೆಗೆ ಸುಳ್ಯ ಸರಕಾರಿ ಆಸ್ಪತ್ರೆಗೆ ಪೊಲೀಸರು ಕೊಂಡೊಯ್ದಿದ್ದರು. ಆರೋಪಿಗಾಗಿ ಮತ್ತೆ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.