ಸುಳ್ಯ ದಸರಾ ವೈಭವದ ಶೋಭಾಯಾತ್ರೆ

ಸುಳ್ಯ ದಸರಾ ವೈಭವದ ಶೋಭಾಯಾತ್ರೆ


ಸುಳ್ಯ: ಶ್ರೀ ಶಾರದಾಂಬಾ ದಸರಾ ಸೇವಾ ಟ್ರಸ್ಟ್ ಸುಳ್ಯ, ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ ಸುಳ್ಯ, ದಸರಾ ಉತ್ಸವ ಸಮಿತಿ ಹಾಗೂ ಶ್ರೀ ಶಾರದಾಂಬ ಉತ್ಸವ ಸಮಿತಿ ಇದರ ಆಶ್ರಯದಲ್ಲಿ 53ನೇ ವರ್ಷದ ಶ್ರೀ ಶಾರದಾಂಬಾ ಉತ್ಸವ ‘ಸುಳ್ಯ ದಸರಾ’ ವೈಭವದ ಶೋಭಾಯಾತ್ರೆಯೊಂದಿಗೆ ಸಂಪನ್ನಗೊಂಡಿತು.ಅ.17 ರಂದು ಮಹಾಪೂಜೆಯಾಗಿ ಸಂಜೆ 5ರಿಂದ ಶ್ರೀ ದೇವಿಯ ವೈಭವದ ಶೋಭಾಯಾತ್ರೆ ಆರಂಭಗೊಂಡಿತು. ಶ್ರೀ ದೇವಿಗೆ ವಿಶೇಷ ಅಲಂಕಾರದೊಂದಿಗೆ, ವಿದ್ಯುತ್ ದೀಪಗಳಿಂದ ಅಲಂಕರಿಸಿದ ಮಂಟಪದಲ್ಲಿ ಶ್ರೀ ದೇವಿಯ ಶೋಭಾಯಾತ್ರೆ ನಡೆಯಿತು. ಜನರ ಮೈಮನ ರೋಮಾಂಚನಗೊಳಿಸುವ ಚಲಿಸುವ ಸ್ತಬ್ದ ಚಿತ್ರಗಳು, ಕಿವಿಗಪ್ಪಆಸುವ ನಾಸಿಕ್ ಬ್ಯಾಂಡ್‌ನ ಅಬ್ಬರ, ಕೊಂಬು, ಕಹಳೆ, ವಾಲಗ, ವಿಶೇಷ ಸಿಡಿಮದ್ದು, ನೃತ್ಯ ಭಜನೆ, ಇನ್ನಿತರ ಹತ್ತು ಹಲವು ಆಕರ್ಷಣಿಗಳೊಂದಿಗೆ ಅದ್ಧೂರಿ ಶೋಭಾಯಾತ್ರೆ

ನೋಡುಗರ ಕಣ್ಣಿಗೆ ಹಬ್ಬವನ್ನು ನೀಡಿತು.ಚೆನ್ನಕೇಶವ ದೇವಸ್ಥಾನದ ಮುಂಭಾಗದ ಶ್ರೀ ಶಾರದಾಂಬಾ ಕಲಾ ವೇದಿಕೆಯಲ್ಲಿ ಶಾರದಾ ದೇವಿಗೆ ಪುರೋಹಿತ ನಾಗರಾಜ ಭಟ್ ನೇತೃತ್ವದಲ್ಲಿ ವಿಶೇಷ ಪೂಜೆ ನಡೆದ ಬಳಿಕ ಶೋಭಾಯಾತ್ರೆ ಆರಂಭಗೊಂಡಿತು. 

ದಸರಾ ಉತ್ಸವ ಸಮಿತಿಯ ಗೌರವಾಧ್ಯಕ್ಷ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ದಸರಾ ಉತ್ಸವ ಸಮಿತಿಯ ಅಧ್ಯಕ್ಷೆ, ಶಾಸಕಿ ಭಾಗೀರಥಿ ಮುರುಳ್ಯ ಹಾಗೂ ಶಾರದಾಂಬಾ ದಸರಾ ಸಮೂಹ ಸಮಿತಿಗಳ ಪದಾಧಿಕಾರಿಗಳು ಕೇಸರಿ ನಿಶಾನೆ ತೋರಿ ಚಾಲನೆ ನೀಡಿದರು. 

ಈ ಸಂದರ್ಭದಲ್ಲಿ ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿಯ ಅಧ್ಯಕ್ಷ ನಾರಾಯಣ ಕೇಕಡ್ಕ, ಶ್ರೀ ಶಾರದಾಂಬ ಉತ್ಸವ ಸಮಿತಿಯ ಗೌರವಾಧ್ಯಕ್ಷ ಕೃಷ್ಣ ಕಾಮತ್ ಅರಂಬೂರು, ಶ್ರೀ ಶಾರದಾಂಬ ಉತ್ಸವ ಸಮಿತಿಯ ಅಧ್ಯಕ್ಷ ಡಾ. ಲೀಲಾಧರ ಡಿ.ವಿ., ಸುಳ್ಯ ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿಯ ಗೌರವಾಧ್ಯಕ್ಷ ಕೆ. ಗೋಕುಲ್‌ದಾಸ್ ಶ್ರೀ ಶಾರದಾಂಬ ಸೇವಾ ಸಮಿತಿಯ ಕೋಶಾಧಿಕಾರಿ ಅಶೋಕ್ ಪ್ರಭು, ಶ್ರೀ ಶಾರದಾಂಬ ಉತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಸಂತೋಷ್ ಕುತ್ತಮೊಟ್ಟೆ, ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್ ಖಜಾಂಜಿ ಬೂಡು ರಾಧಾಕೃಷ್ಣ ರೈ, ಶ್ರೀ ಶಾರದಾಂಬ ಸೇವಾ ಸಮಿತಿಯ ಪ್ರಧಾನ ಕಾರ್ಯದರ್ಶಿ ರಾಜು ಪಂಡಿತ್, ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್ ಅಧ್ಯಕ್ಷ ನವೀನ್ ಚಂದ್ರ ಕೆ.ಎಸ್., ಕಾರ್ಯದರ್ಶಿ ಎಂ.ಕೆ. ಸತೀಶ್, ಶ್ರೀ ಶಾರದಾಂಬ ಉತ್ಸವ ಸಮಿತಿಯ ಕೋಶಾಧಿಕಾರಿ ಗಣೇಶ್ ಆಳ್ವ, ದಸರಾ ಉತ್ಸವ ಸಮಿತಿಯ ಕೋಶಾಧಿಕಾರಿ ಸುನಿಲ್ ಕೇರ್ಪಳ ಹಾಗೂ ಶಾರದಾಂಬ, ದಸರಾ ಸಮೂಹ ಸಮಿತಿಯ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವಿವಿಧ ಧಾರ್ಮಿಕ ಹಾಗೂ ವೈವಿಧ್ಯಮಯ ಕಲಾ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ 9 ದಿನಗಳ ಕಾಲ ನಡೆದ ಸುಳ್ಯ ದಸರಾ ಉತ್ಸವ ವೈಭವದ ಮೆರವಣಿಗೆಯೊಂದಿಗೆ ಸಂಪನ್ನಗೊಂಡಿತು.



Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article