ಉಡುಪಿ ಉಚ್ಚಿಲ ದಸರಾಕ್ಕೆ ಉಡುಪಿ ಜಿಲ್ಲಾಧಿಕಾರಿಗಳಿಂದ ಸಂಭ್ರಮದ ಚಾಲನೆ
ಉಚ್ಚಿಲ: ಕರ್ನಾಟಕದ ಕೊಲ್ಹಾಪುರ ಖ್ಯಾತಿಯ ಉಚ್ಚಿಲ ಶ್ರೀ ಮಹಾಲಕ್ಷಿ ದೇವಳದಲ್ಲಿ ತೃತೀಯ ವರ್ಷದ ಉಡುಪಿ ಉಚ್ಚಿಲ ದಸರಾ ಮಹೋತ್ಸವಕ್ಕೆ ಗುರುವಾರ ಸಂಭ್ರಮದ ಚಾಲನೆ ನೀಡಲಾಗಿದ್ದು, ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಉದ್ಘಾಟಿಸಿ, ತಾಯಿ ಶಾರದೆ ಎಲ್ಲರಿಗೂ ಸನ್ಮಂಗಳ ಉಂಟು ಮಾಡಲಿ ಎಂದು ಹಾರೈಸಿದರು.
ಶ್ರೀಕ್ಷೇತ್ರದ ಶಾಲಿನಿ ಡಾ. ಜಿ. ಶಂಕರ್ ಸಭಾಂಗಣದಲ್ಲಿ ಪ್ರತಿಷ್ಠಾಪಿಸಲಾದ ಶ್ರೀ ಶಾರದಾಮಾತೆ ಹಾಗೂ ನವದುರ್ಗೆಯರ ವಿಗ್ರಹಗಳನ್ನು ಕ್ಷೇತ್ರ ತಂತ್ರಿ ಕುಕ್ಕಿಕಟ್ಟೆ ರಾಘವೇಂದ್ರ ತಂತ್ರಿ ಹಾಗೂ ಪ್ರಧಾನ ಪುರೋಹಿತ ಕೆ.ವಿ. ರಾಘವೇಂದ್ರ ಉಪಾಧ್ಯಾಯರ ನೇತೃತ್ವದಲ್ಲಿ ಪ್ರತಿಷ್ಠಾಪಿಸಲಾಗಿದೆ.
ಮಹೋತ್ಸವದ ರೂವಾರಿ ಹಾಗೂ ದ.ಕ. ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ ನಾಡೋಜ ಡಾ. ಜಿ. ಶಂಕರ್, ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಬೆಳ್ಳಂಪಳ್ಳಿ, ಕಾಪು ತಹಶಿಲ್ದಾರ್, ಡಾ. ಪ್ರತಿಭಾ ಆರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕಿ ಪೂರ್ಣಿಮ, ಉದ್ಯಮಿ ಕನ್ಯಾನ ಸದಾಶಿವ ಶೆಟ್ಟಿ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮೊದಲಾದವರಿದ್ದರು.
ದಸರಾ ಮಹೋತ್ಸವ ಪ್ರಯುಕ್ತ ಆಯೋಜಿಸಲಾಗಿರುವ ಪುಸ್ತಕ ಪ್ರದರ್ಶನ, ಫಲಪುಷ್ಪ ಪ್ರದರ್ಶನ, ಗುಡಿ ಕೈಗಾರಿಕಾ ಪ್ರಾತ್ಯಕ್ಷಿಕೆ, ಸಮುದ್ರದ ಜೀವಂತ ಮೀನುಗಳ ಪ್ರದರ್ಶನ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಲ್ಲಿ ಲಭ್ಯವಿರುವ ಮೀನುಗಾರಿಕೆ ಯೋಜನೆಗಳ ಮಾಹಿತಿ ಮತ್ತು ಮೀನುಗಾರಿಕಾ ಪರಿಕರಗಳ ಪ್ರದರ್ಶನ ಸೇರಿದಂತೆ ವಿವಿಧ ಪ್ರದರ್ಶನಗಳ ಉದ್ಘಾಟನೆ ನೆರವೇರಿತು.
ದ.ಕ. ಮೊಗವೀರ ಮಹಾಜನ ಸಂಘದ 100ನೇ ವರ್ಷದ ಸವಿನೆನಪಿಗೆ ನವೀಕರಿಸಲ್ಪಟ್ಟ ನೂತನ ಆಡಳಿತ ಕಚೇರಿಯ ಶುಭಾರಂಭ ನೆರವೇರಿತು.
ಈ ಸಂದರ್ಭದಲ್ಲಿ ದ.ಕ. ಮೊಗವೀರ ಮಹಾಜನ ಸಂಘದ ಉಪಾಧ್ಯಕ್ಷ ಮೋಹನ್ ಬೇಂಗ್ರೆ, ಪ್ರಧಾನ ಕಾರ್ಯದರ್ಶಿ ಶರಣ್ ಕುಮಾರ್ ಮಟ್ಟು, ಜೊತೆ ಕಾರ್ಯದರ್ಶಿ ಸುಜಿತ್ ಸಾಲ್ಯಾನ್ ಮುಲ್ಕಿ, ಕೋಶಾಧಿಕಾರಿ ರತ್ನಾಕರ ಸಾಲ್ಯಾನ್, ಕ್ಷೇತ್ರಾಡಳಿತ ಮಂಡಳಿ ಅಧ್ಯಕ್ಷ ಗಿರಿಧರ ಸುವರ್ಣ ಮೂಳೂರು, ಕಾರ್ಯದರ್ಶಿ ನಾರಾಯಣ ಸಿ ಕರ್ಕೇರ, ಕೋಶಾಧಿಕಾರಿ ಸುಧಾಕರ್ ಕುಂದರ್, ಸದಸ್ಯರಾದ ಮೋಹನ್ ಬಂಗೇರ ಕಾಪು, ದಿನೇಶ್ ಎರ್ಮಾಳು, ಬೆಣ್ಣೆಕುದ್ರು ಕ್ಷೇತ್ರದ ಅಧ್ಯಕ್ಷ ಆನಂದ ಸಿ. ಕುಂದರ್, ಮೊಗವೀರ ಮಹಾಜನ ಸಂಘದ ಮಹಿಳಾ ಮಂಡಳಿ ಅಧ್ಯಕ್ಷೆ ಉಷಾರಾಣಿ ಬೋಳೂರು, ಪ್ರಧಾನ ಕಾರ್ಯದರ್ಶಿ ಉಷಾ ಲೋಕೇಶ್, ಕಾಪು ನಾಲ್ಕುಪಟ್ಣ ಮೊಗವೀರ ಸಭಾ ಉಚ್ಚಿಲ ಅಧ್ಯಕ್ಷ ಮನೋಜ್ ಪಿ. ಕಾಂಚನ್, ಮಹಿಳಾ ಸಭಾದ ಅಧ್ಯಕ್ಷೆ ಸುಗುಣ ಎಸ್ ಕರ್ಕೇರ, ದ.ಕ ಮೊಗವೀರ ಮಹಾಜನ ಸಂಘ ಉಚ್ಚಿಲ ಆಡಳಿತ ಮಂಡಳಿ ಸದಸ್ಯರಾದ ವಾಸುದೇವ ಸಾಲ್ಯಾನ್ ಕಟಪಾಡಿ, ಗುಂಡು ಬಿ. ಅಮೀನ್ ಕಿದಿಯೂರು, ಸತೀಶ್ ಎಸ್ ಅಮೀನ್ ಬೆಣ್ಣೆ ಕುದ್ರು, ಮಂಜುನಾಥ್ ಸುವರ್ಣ ಬ್ರಹ್ಮಾವರ, ರವೀಂದ್ರ ಶ್ರೀಯಾನ್ ಹಿರಿಯಡ್ಕ, ಶಿವರಾಮ ಕೋಟ, ಲೋಕೇಶ್ ಮೆಂಡನ್ ಉಪ್ಪೂರು, ವಿನಯ ಕರ್ಕೇರ ಮಲ್ಪೆ, ಕೇಶವ ಎಂ ಕೋಟ್ಯಾನ್ ಮಲ್ಪೆ, ಗಿರೀಶ್ ಕುಮಾರ್ ಪಿತ್ರೋಡಿ, ಜಯಂತ್ ಸಾಲ್ಯಾನ್ ಕನಕೋಡ, ಕಿರಣ್ ಕುಮಾರ್ ಪಿತ್ರೋಡಿ, ಸುಧಾಕರ ವಿ ಸುವರ್ಣ ಉಚ್ಚಿಲ, ನಾರಾಯಣ ಸಿ ಕರ್ಕೇರ ಪಡಬಿದ್ರಿ ಕಾಡಿಪಟ್ಣ, ಸತೀಶ್ ಆರ್ ಕರ್ಕೇರ ಸುರತ್ಕಲ್, ವಿಜಯ ಸುವರ್ಣ ಕುಳಾಯಿ, ಹೇಮಂತ್ ತಿಂಗಳಾಯ ಹೊಯ್ಗೆಬಜಾರ್, ಪುರುಷೋತ್ತಮ ಕೋಟ್ಯಾನ್ ಬೋಳೂರು, ಯಶವಂತ್ ಪಿ ಮೆಂಡನ್ ಬೋಳೂರು, ಶಿಲ್ಪ ಜಿ. ಸುವರ್ಣ ಮೊದಲಾದವರಿದ್ದರು. ದೇವಳದ ಪ್ರಬಂಧಕ ಸತೀಷ್ ಅಮೀನ್ ಪಡುಕೆರೆ ನಿರೂಪಿಸಿದರು.