ಉಡುಪಿಯಲ್ಲಿ ಸರಣಿ ಕಳ್ಳತನ

ಉಡುಪಿಯಲ್ಲಿ ಸರಣಿ ಕಳ್ಳತನ

ಉಡುಪಿ: ನಗರದಲ್ಲಿ ಸರಣಿ ಕಳ್ಳತನ ನಡೆದಿದ್ದು ನಗರದ ಜನತೆ ಬೆಚ್ಚಿ ಬಿದ್ದಿದ್ದಾರೆ. ಉಡುಪಿ ನಗರ ಪೊಲೀಸ್ ಠಾಣೆ ಎದುರೇ ಇರುವ ಸರ್ಕಾರಿ ನೌಕರರ ವಸತಿ ಸಮುಚ್ಛಯದಲ್ಲಿ ಭಾನುವಾರ ರಾತ್ರಿ ಈ ಘಟನೆ ಸಂಭವಿಸಿದ್ದು ಪೊಲೀಸರು ಸ್ಥಳಕ್ಕೆ ಆಗಮಿಸಿ, ತನಿಖೆ ನಡೆಸಿದರು.
ವಸತಿ ಸಮುಚ್ಛಯದ ಸುಮಾರು ಆರು ಮನೆಗಳಿಗೆ ಕಳ್ಳರು ನುಗ್ಗಿದ್ದು ನಗದು ಮತ್ತು ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ವಿಷಯ ತಿಳಿದು ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು ಮಾಹಿತಿ ಕಲೆಹಾಕುತ್ತಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article