ಪ್ರಮೋದ್ ಆರೋಗ್ಯದಲ್ಲಿ ಸುಧಾರಣೆ
Friday, October 11, 2024
ಉಡುಪಿ: ತೀವ್ರ ಜ್ವರದಿಂದಾಗಿ ಬುಧವಾರ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಆರೋಗ್ಯದಲ್ಲಿ ಸುಧಾರಣೆಯಾಗಿದೆ. ಸಾಮಾನ್ಯ ಜ್ವರದಿಂದ ಬಳಲುತ್ತಿರುವ ಅವರು ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕಿನಿಂದಾಗಿ ಜ್ವರ ಉಲ್ಬಣಗೊಂಡಿತ್ತು. ಇದೀಗ ಜ್ವರ ಕಡಿಮೆಯಾಗಿದೆ ಎಂದು ಪ್ರಮೋದ್ ಮಧ್ವರಾಜ್ ಸಂಯುಕ್ತ ಕರ್ನಾಟಕಕ್ಕೆ ತಿಳಿಸಿದರು.