ಪರಿಷತ್ ಉಪಚುನಾವಣೆಗೆ ಜಿಲ್ಲಾಡಳಿತ ಸಜ್ಜು: ಮಮತಾದೇವಿ ಜಿ.ಎಸ್.

ಪರಿಷತ್ ಉಪಚುನಾವಣೆಗೆ ಜಿಲ್ಲಾಡಳಿತ ಸಜ್ಜು: ಮಮತಾದೇವಿ ಜಿ.ಎಸ್.

ಉಡುಪಿ: ಕೋಟ ಶ್ರೀನಿವಾಸ ಪೂಜಾರಿ ಅವರಿಂದ ತೆರವಾಗಿರುವ ದಕ್ಷಿಣ ಕನ್ನಡ ಸ್ಥಳೀಯಾಡಳಿತ ಕ್ಷೇತ್ರದ ವಿಧಾನ ಪರಿಷತ್ ಉಪಚುನಾವಣೆ ಸೋಮವಾರ ನಡೆಯಲಿದ್ದು, ಸುಸೂತ್ರ ಮತದಾನಕ್ಕೆ ಜಿಲ್ಲಾಡಳಿತ ಸಜ್ಜುಗೊಂಡಿದೆ ಎಂದು ಉಪಚುನಾವಣಾಧಿಕಾರಿ ಎಡಿಸಿ ಮಮತಾದೇವಿ ಜಿ.ಎಸ್. ತಿಳಿಸಿದ್ದಾರೆ.

ಅವಿಭಜಿತ ದ.ಕ. ಜಿಲ್ಲೆಯ ಒಟ್ಟು 6,032 ಮತದಾರರ ಪೈಕಿ ಉಡುಪಿ ಜಿಲ್ಲೆಯಲ್ಲಿ 2,480 ಮತದಾರರಿದ್ದಾರೆ. 158 ಮತಕೇಂದ್ರಗಳನ್ನು ಹೊಂದಿದೆ. ಅವುಗಳಲ್ಲಿ 30 ಮತದಾನ ಕೇಂದ್ರಗಳು ಸೂಕ್ಷ್ಮ ಮತಗಟ್ಟೆಗಳು ಎಂದು ಗುರುತಿಸಲಾಗಿದೆ.

ಜಿಲ್ಲೆಯ ಜ್ವಲಂತ ಸಮಸ್ಯೆಯಾದ ಕಸ್ತೂರಿ ರಂಗನ್ ವರದಿ ಹಿನ್ನೆಲೆಯಲ್ಲಿ ಕುಂದಾಪುರ, ಬೈಂದೂರು, ಕಾರ್ಕಳ ಮತ್ತು ಹೆಬ್ರಿ ತಾಲೂಕಿನ 37 ಗ್ರಾಮಗಳಲ್ಲಿ ತೀವ್ರ ವಿರೋಧ ವ್ಯಕ್ತವಾಗಿದ್ದು, ಮತದಾನ ಬಹಿಷ್ಕಾರದ ಬೆದರಿಕೆ ವ್ಯಕ್ತವಾಗಿದ್ದು, ಜಿಲ್ಲಾಡಳಿತ ಮತ್ತು ರಾಜಕೀಯ ಪಕ್ಷಗಳು ಅಲ್ಲಿನ ಮತದಾರರ ಮನವೊಲಿಸುವ ಯತ್ನದಲ್ಲಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article