ನೀತಿಸಂಹಿತೆ ಉಲ್ಲಂಘನೆಯಾಗದಂತೆ ಕಾರ್ಯಕ್ರಮ ಆಯೋಜಿಸಿ
Wednesday, October 2, 2024
ಉಡುಪಿ: ಚುನಾವಣಾ ಆಯೋಗ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ದೈವಾರ್ಷಿಕ ಚುನಾವಣಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಸುವ ಬಗ್ಗೆ ಚುನಾವಣಾ ವೇಳಾಪಟ್ಟಿ ಘೋಷಿಸಿ ಅಧಿಸೂಚನೆ ಹೊರಡಿಸಿದ್ದು ಅದರಂತೆ ಸೆ. 19ರಿಂದ ಮಾದರಿ ನೀತಿ ಸಂಹಿತ ಜಾರಿಯಲ್ಲಿದೆ.
ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ತಡೆಗಟ್ಟುವ ಉದ್ದೇಶದಿಂದ ತಾಲೂಕು ಮಟ್ಟದಲ್ಲಿ ವಿವಿಧ ತಂಡಗಳನ್ನು ರಚಿಸಲಾಗಿದ್ದು, ಚುನಾವಣೆಯ ಮಾದರಿ ನೀತಿ ಸಂಹಿತೆ ಅ. 28ರ ವರೆಗೆ ಜಾರಿಯಲ್ಲಿದೆ. ನವರಾತ್ರಿ ಹಾಗೂ ಶಾರದೋತ್ಸವ ಸಂದರ್ಭಗಳಲ್ಲಿ ದಸರಾ ಆಚರಣೆ ನಡೆಸುವ ಆಯೋಜಕರು ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಕಾರ್ಯಕ್ರಮ ಆಯೋಜಿಸಲು ಚುನಾವಣಾಧಿಕಾರಿ ನಿರ್ದೇಶನದಂತೆ ಕ್ರಮ ವಹಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.