
ಮೀನು ಆಯುವ ಏಳು ಮಕ್ಕಳ ರಕ್ಷಣೆ
Saturday, October 26, 2024
ಉಡುಪಿ: ಮಲ್ಪೆ ಬಂದರಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ, ಮೀನುಗಾರಿಕೆ ಇಲಾಖೆ, ಕಾರ್ಮಿಕ ಇಲಾಖೆ, ಉಡುಪಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ ಹಾಗೂ ನಿತ್ಯಾನಂದ ಒಳಕಾಡು ಮತ್ತು ಸ್ಪೂರ್ತಿ ವಿಶ್ವಾಸದ ಮನೆ ಮುಖ್ಯಸ್ಥರ ನೆರವಿನೊಂದಿಗೆ ಮಲ್ಪೆ ಬಂದರಿನಲ್ಲಿ ಶನಿವಾರ ಮೀನು ಆಯುವ ಮಕ್ಕಳ ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು. ಕಾರ‍್ಯಾಚರಣೆಯಲ್ಲಿ 5 ಮಂದಿ ಗಂಡು ಮಕ್ಕಳನ್ನು ರಕ್ಷಣೆ ಮಾಡಲಾಯಿತು ಹಾಗೂ ಅಲ್ಲಿಯೇ ಕೆಲಸ ಮಾಡುತ್ತಿರುವ 2 ಕಿಶೋರ ಕಾರ್ಮಿಕ ಮಕ್ಕಳನ್ನು ರಕ್ಷಣೆ ಮಾಡಿ ಎಲ್ಲಾ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಲಾಯಿತು.
ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರ ಆದೇಶದ ಮೇರೆಗೆ 6 ಬಾಲಕರಿಗೆ ಬಾಲಕರ ಬಾಲ ಮಂದಿರದಲ್ಲಿ ಪುನರ್ವಸತಿ ಕಲ್ಪಿಸಲಾಯಿತು ಓರ್ವ ಬಾಲಕನನ್ನು ಅನಾರೋಗ್ಯದ ಸಮಸ್ಯೆಯಿಂದ ಪೋಷಕರ ವಶಕ್ಕೆ ಬಿಡುಗಡೆಗೊಳಿಸಲಾಯಿತು.