
ಬಹಿಷ್ಕಾರ ಕೈಬಿಟ್ಟು ಮತದಾನ ಮಾಡಿ
Sunday, October 20, 2024
ಉಡುಪಿ: ಜಿಲ್ಲೆಯ ಕೆಲವು ಭಾಗಗಳಲ್ಲಿ ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ ವ್ಯಕ್ತವಾಗಿದ್ದು, ಅಂಥ ಕಡೆಗಳಲ್ಲಿ ಮತದಾನ ಬಹಿಷ್ಕಾರದ ಬೆದರಿಕೆ ಬಂದಿವೆ.
ಜನತೆಯ ಮನವಿಯನ್ನು ಸರ್ಕಾರದ ಗಮನಕ್ಕೆ ತರಲಾಗುತ್ತಿದ್ದು ಚುನಾವಣೆ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
ಹಾಗಾಗಿ ಮತದಾನ ಬಹಿಷ್ಕಾರದ ನಿರ್ಧಾರ ಕೈಬಿಟ್ಟು ಅ.21ರಂದು ಮತದಾನದ ಅರ್ಹತೆ ಹೊಂದಿರುವ ಎಲ್ಲರೂ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡುವಂತೆ ಸಹಾಯಕ ಚುನಾವಣಾಧಿಕಾರಿಯೂ ಅಗಿರುವ ಉಡುಪಿ ಜಿಲ್ಲಾ ಹೆಚ್ಚುವರಿ ಜಿಲ್ಲಾಧಿಕಾರಿ ಮಮತಾದೇವಿ ಜಿ.ಎಸ್ ಮನವಿ ಮಾಡಿದ್ದಾರೆ.