ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧ್ಯತೆ: ಐವನ್ ಡಿ'ಸೋಜ
Tuesday, October 1, 2024
ಉಡುಪಿ: ಮುಂಬರುವ ಸ್ಥಳೀಯಾಡಳಿತ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧ್ಯತೆ ಇದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿ'ಸೋಜ ಹೇಳಿದರು.
ವಿಧಾನ ಪರಿಷತ್ ಉಪಚುನಾವಣೆಯ ಅಭ್ಯರ್ಥಿ ಪ್ರಕ್ರಿಯೆ ಹಾಗೂ ಚುನಾವಣೆಯ ರೂಪುರೇಷೆ ಸಿದ್ಧತೆ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು.
ಹಲವಾರು ಆಕಾಂಕ್ಷಿಗಳು ಉಮೇದುವಾರಿಕೆ ತೋರ್ಪಡಿಸಿದ್ದಾರೆ. ಆದರೆ, ಜಯ ಗಳಿಸಬೇಕಾದರೆ ಜವಾಬ್ದಾರಿ ನಿಭಾಯಿಸಿಕೊಳ್ಳಬೇಕು. ಕರ‍್ಯಕರ್ತರಿಗೆ ಹಂಚಿಕೊಡಬೇಕು. ಕಾಂಗ್ರೆಸ್‌ಗೆ ಮತಗಳ ಸಂಖ್ಯೆ ಕಡಿಮೆ ಇದ್ದರೂ ಇತರ ಮತ ಗಳಿಸಲು ಪ್ರಯತ್ನಪಟ್ಟಲ್ಲಿ ಜಯ ಗಳಿಸುವುದರಲ್ಲಿ ಸಂಶಯವಿಲ್ಲ ಎಂದರು.
ಬಿಜೆಪಿಯ ಅಪಪ್ರಚಾರ ಬಗ್ಗೆ ಜನತೆಗೆ ತಿಳಿಸುವ ಮೂಲಕ ಅವರಲ್ಲಿ ಜಾಗೃತಿ ಮೂಡಿಸಬೇಕು ಎಂದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕುಮಾರ್ ಕೊಡವೂರು ಅಧ್ಯಕ್ಷತೆ ವಹಿಸಿದ್ದರು. ಪಕ್ಷ ಪ್ರಮುಖರಾದ ವಿನಯ ಕುಮಾರ್ ಸೊರಕೆ, ಜಯಪ್ರಕಾಶ ಹೆಗ್ಡೆ, ಎಂ.ಎ. ಗಫೂರ್, ಕಿಶನ್ ಹೆಗ್ಡೆ ಕೊಳ್ಕೆಬೈಲು, ಮುನಿಯಾಲು ಉದಯ ಕುಮಾರ್ ಶೆಟ್ಟಿ, ಪ್ರಸಾದ್‌ರಾಜ್ ಕಾಂಚನ್, ಹರೀಶ್ ಕಿಣಿ, ಕಾಪು ದಿವಾಕರ ಶೆಟ್ಟಿ, ಬಿ. ನರಸಿಂಹಮೂರ್ತಿ ಮೊದಲಾದವರಿದ್ದರು.
ಇತ್ತೀಚೆಗೆ ಅಗಲಿದ ಪಕ್ಷದ ಮುಖಂಡರಿಗೆ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಜ್ಯೋತಿ ಹೆಬ್ಬಾರ್ ನುಡಿನಮನ ಸಲ್ಲಿಸಿದರು. ಎಐಸಿಸಿ ವಕ್ತಾರೆ ವೆರೋನಿಕಾ ಕರ್ನೇಲಿಯೊ ಸ್ವಾಗತಿಸಿದರು. ಸಹಕಾರಿ ಕಾಂಗ್ರೆಸ್ ಅಧ್ಯಕ್ಷ ಅಣ್ಣಯ್ಯ ಸೇರಿಗಾರ್ ನಿರೂಪಿಸಿದರು. ಜಿಲ್ಲಾ ವಕ್ತಾರ ಭಾಸ್ಕರ ರಾವ್ ಕಿದಿಯೂರು ವಂದಿಸಿದರು.