
ರುಪ್ಸಾ ಪ್ರಶಸ್ತಿಗೆ ಆಯ್ಕೆ
Sunday, October 20, 2024
ಉಡುಪಿ: ಅನುದಾನ ರಹಿತ ಶಾಲೆಗಳಲ್ಲಿನ ಅಧ್ಯಾಪಕರು ಹಾಗೂ ಸಂಚಾಲಕರ ಸಂಘಟನೆ ರುಪ್ಸಾ ನೀಡುವ ಉತ್ತಮ ಆಡಳಿತಗಾರ ಪ್ರಶಸ್ತಿಗೆ ಬ್ರಹ್ಮಾವರ ನಿರ್ಮಲ ಆಂಗ್ಲ ಮಾಧ್ಯಮ ಶಾಲಾ ಸಂಚಾಲಕ ವಂ. ಜಾನ್ ಫೆರ್ನಾಂಡಿಸ್ ಹಾಗೂ ಉತ್ತಮ ಶಿಕ್ಷಕ ಪ್ರಶಸ್ತಿಗೆ ಸಾಸ್ತಾನ ಸಂತ ಅಂತೋನಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಅನಿತಾ ಡಿ’ ಅಲ್ಮೆಡಾ ಆಯ್ಕೆಯಾಗಿದ್ದಾರೆ.
ಬ್ರಹ್ಮಾವರ ಹೋಲಿ ಫ್ಯಾಮಿಲಿ ಚರ್ಚ್ ಧರ್ಮಗುರು ವಂ. ಜಾನ್ ಫೆರ್ನಾಂಡಿಸ್ ಅವರು ನಿರ್ಮಲ ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.
ಶಿಕ್ಷಕಿಯಾಗಿ 25 ವರ್ಷಗಳ ಅನುಭವ ಹೊಂದಿದ್ದು, ಕಳೆದ 15 ವರ್ಷದಿಂದ ಸಾಸ್ತಾನ ಸಂತ ಅಂತೋನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕಿಯಾಗಿ, ಪ್ರಸ್ತುತ ಮುಖ್ಯ ಶಿಕ್ಷಕಿಯಾಗಿರುವ ಅನಿತಾ ಡಿ’ಅಲ್ಮೇಡಾ ಪಠ್ಯ ಹಾಗೂ ಪಠ್ಯೇತರ ವಿಷಯಗಳಲ್ಲಿ ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಮೂಲಕ ಉತ್ತಮ ಸೇವೆ ಸಲ್ಲಿಸುತ್ತಿದ್ದಾರೆ.
ಅ. 21ರಂದು ಬೆಂಗಳೂರಿನ ಜುಬಿಲಿ ಇಂಟರ್ ನ್ಯಾಷನಲ್ ಸ್ಕೂಲ್‌ನಲ್ಲಿ ನಡೆಯುವ ಸಮಾರಂಭದಲ್ಲಿ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.