
ಪೇಜಾವರಶ್ರೀ ವಿರುದ್ಧದ ಹೇಳಿಕೆ ಖಂಡನೀಯ: ಕೆ. ರಘುಪತಿ ಭಟ್
Monday, October 28, 2024
ಉಡುಪಿ: ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಕುರಿತು ಕಾಂಗ್ರೆಸ್ ಮುಖಂಡ, ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಮಾಜಿ ಶಾಸಕ ಕೆ. ರಘುಪತಿ ಭಟ್ ಖಂಡಿಸಿದ್ದಾರೆ.
ಪೇಜಾವರ ಶ್ರೀಗಳು ರಾಮ ರಾಜ್ಯದ ಕನಸಿನೊಂದಿಗೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಶಿಕ್ಷಣ, ಆರೋಗ್ಯ, ಗೃಹ ನಿರ್ಮಾಣದ ಸೌಲಭ್ಯ ದೊರಕಿಸಿಕೊಡುವಲ್ಲಿ ಹಾಗೂ ಅನಾಥಾಶ್ರಮ, ವೃದ್ಧಾಶ್ರಮ ಮೊದಲಾದ ಯಾವುದಾದರೂ ಸಮಾಜ ಸೇವಾ ಸಂಸ್ಥೆಗಳಿಗೆ ನೆರವು ನೀಡುವ ತನ್ನ ಯೋಜನೆಯನ್ನು ಸಾಕಾರಗೊಳಿಸುವಲ್ಲಿ ಶ್ರಮಿಸುತ್ತಿದ್ದಾರೆ. ಸಾಮಾಜಿಕ ಕ್ಷೇತ್ರದಲ್ಲಿ ಜವಾಬ್ದಾರಿಯುತ ಸ್ಥಾನದಲ್ಲಿರುವವರು ಯಾರ ಬಗ್ಗೆಯೂ ಮಾತನಾಡುವಾಗ ತಮ್ಮ ಸ್ಥಾನದ ಘನತೆಯನ್ನು ಅರಿತು ಮಾತನಾಡಬೇಕು ಎಂದು ಭಟ್ ಎಚ್ಚರಿಸಿದ್ದಾರೆ.