
ವಿಧಾನ ಪರಿಷತ್ ಚುನಾವಣೆ: ನಿಷೇಧಾಜ್ಞೆ ಜಾರಿ
Saturday, October 19, 2024
ಉಡುಪಿ: ಕರ್ನಾಟಕ ವಿಧಾನ ಪರಿಷತ್ ಉಪ ಚುನಾವಣೆಗೆ ಸಂಬಂಧಿಸಿದಂತೆ ಅ. 21ರಂದು ಮತದಾನ ನಡೆಯಲಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿ ಸುವ್ಯವಸ್ಥೆ ಕಾಪಾಡುವ ಮೂಲಕ ಮುಕ್ತ ಮತ್ತು ನ್ಯಾಯಯುತ ಹಾಗೂ ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ನಿಗದಿಪಡಿಸಲಾದ ಒಟ್ಟು 158 ಮತದಾನ ಕೇಂದ್ರಗಳ ಸುತ್ತಮುತ್ತ 100 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿದ್ದಾರೆ.