ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಿನಿ-ಅನ್ವೇಷಣಾ-2024

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಿನಿ-ಅನ್ವೇಷಣಾ-2024


ಉಜಿರೆ: ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜು ಮತ್ತು ಅಗಸ್ತ್ಯ ಅಂತರಾಷ್ಟ್ರೀಯ ಫೌಂಡೇಶನ್, ಬೆಂಗಳೂರು ಸಹಯೋಗದಲ್ಲಿ ‘ಮಿನಿ-ಅನ್ವೇಷಣಾ-2024 ಪ್ರಸೆಂಟ್ ಯುವರ್ ಇನೊವೇಟಿವ್ ಐಡಿಯಾ’ ಕಾರ್ಯಕ್ರಮವನ್ನು ಅ.18 ರಂದು ಕಾಲೇಜಿನಲ್ಲಿ ನಡೆಯಿತು.

ಈ ಅನ್ವೇಷಣಾ ಕಾರ್ಯಕ್ರಮದಲ್ಲಿ ಒಟ್ಟು 180 ವಿದ್ಯಾರ್ಥಿಗಳು 45 ತಂಡಗಳಾಗಿ ಭಾಗವಹಿಸಿದರು. ವಿವಿಧ ಸಮಸ್ಯೆಗಳಿಗೆ ತಂತ್ರಜ್ಞಾನದ ಅಳವಡಿಕೆ ಮೂಲಕ ಪರಿಹಾರ ಕಂಡುಕೊಳ್ಳುವಲ್ಲಿ ವಿದ್ಯಾರ್ಥಿಗಳು ತಮ್ಮ ನವೀನ ಕಲ್ಪನೆಗಳನ್ನು ಪ್ರಸ್ತುತಪಡಿಸಿದರು.

ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಪ್ರಾಂಶುಪಾಲ ಡಾ. ಆಶೋಕ್ ಕುಮಾರ್, ಇಲೆಕ್ಟ್ರಾನಿಕ್ಸ್ ವಿಭಾಗ ಮುಖ್ಯಸ್ಥ ಡಾ. ಮಧುಸೂದನ ಮತ್ತು ನೇಮಕಾತಿ ಅಧಿಕಾರಿ ಡಾ. ಸುಬ್ರಮಣ್ಯ ತೋಳ್ಪಾಡಿತ್ತಾಯ ಉಪಸ್ಥಿತರಿದ್ದರು.

ಅಗಸ್ತ್ಯ ಫೌಂಡೇಶನ್‌ನ ಭಾಸ್ಕರ್, ಪ್ರೊಫೆಸರ್ ಡಾ. ಸಂದೀಪ್, ಎಂಐಟಿಇ ಮೂಡಬಿದ್ರಿಯ ಅಸೋಸಿಯೇಟ್ ಪ್ರೊಫೆಸರ್ ಡಾ. ಶಿವರಾಮ್, ಕಾರ್ಯಕ್ರಮ ಸಂಯೋಜಕ ಡಾ. ಮೋಹನ್ ನಾಯ್ಕ ತೀರ್ಪುಗಾರರಾಗಿ ಸಹಕರಿಸಿದರು. ವಿಜೇತ ತಂಡಗಳಿಗೆ ಪ್ರಾಂಶುಪಾಲರು ನಗದು ಬಹುಮಾನ ವಿತರಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article