ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶರನ್ನವರಾತ್ರಿ ಮಹೋತ್ಸವ ಸಂಪನ್ನ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶರನ್ನವರಾತ್ರಿ ಮಹೋತ್ಸವ ಸಂಪನ್ನ

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಅಮ್ಮನವರ ಸನ್ನಿಧಿಯಲ್ಲಿ ಶರನ್ನವರಾತ್ರಿ ಪ್ರಯುಕ್ತ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ಅ.3 ರಿಂದ ಅ.11 ಮಹಾನವಮಿವರೆಗೆ ಪ್ರತಿ ರಾತ್ರಿ ವಿಶೇಷ ಪೂಜೆ, ಬಲಿ ಉತ್ಸವ, ವಸಂತಮಂಟಪದಲ್ಲಿ ಪೂಜೆ, ಕನ್ನಿಕಾಪೂಜೆ, ಅಷ್ಟಾವಧಾನ ಸೇವೆ, ಅ.9 ಮೂಲಾನಕ್ಷತ್ರದಂದು ಚಂಡಿಕಾಯಾಗ, ಅ.11 ರವರೆಗೆ ಪಲ್ಲಕಿ ಉತ್ಸವ ನಡೆಯಿತು.

ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ದೇವಸ್ಥಾನದ ಪ್ರವಚನ ಮಂಟಪದಲ್ಲಿ ಪ್ರತಿ ದಿನ ಸಂಜೆ 6 ರಿಂದ 8 ರವರೆಗೆ ನಾಡಿನ ಖ್ಯಾತ ಕಲಾವಿದರಿಂದ ಸಂಗೀತ, ಭಕ್ತಿ ಸಂಗೀತ, ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ನಡೆಯಿತು. ಪ್ರತಿ ರಾತ್ರಿ ಅಮೃತವರ್ಷಿಣಿ ಸಭಾಭವನದಲ್ಲಿ ವಿವಿಧ ತಂಡಗಳಿಂದ ಆಕರ್ಷಕ ಹುಲಿ ಕುಣಿತ ನಡೆಯಿತು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article