ಧರ್ಮಸ್ಥಳ ಧರ್ಮಾಧಿಕಾರಿಗಳಿಗೆ ಪಟ್ಟಾಭಿಷೇಕ ವರ್ಧಂತಿ ಅಭಿನಂದನೆ
Friday, October 25, 2024
ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕದ 57ನೇ ವರ್ಧಂತ್ಯುತ್ಸವ ಪ್ರಯುಕ್ತ ಅ.24 ರಂದು ನಾಡಿನೆಲ್ಲೆಡೆಗಳಿಂದ ಅಭಿಮಾನಿಗಳು ಶ್ರೀ ಕ್ಷೇತ್ರಕ್ಕೆ ಆಗಮಿಸಿ ಡಾ. ಹೆಗ್ಗಡೆಯವರಿಗೆ ಗೌರವಾರ್ಪಣೆ ಸಲ್ಲಿಸಿ ಅಭಿನಂದಿಸಿದರು.
ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯ ಅಧ್ಯಕ್ಷ ಡಾ. ಹರಿಕೃಷ್ಣ ಪುನರೂರು, ಮಾಜಿ ಜಿಲ್ಲಾಧ್ಯಕ್ಷ ಪ್ರದೀಪ ಕುಮಾರ್ ಕಲ್ಕೂರ, ಮೂಡಬಿದ್ರಿಯ ಉದ್ಯಮಿ ಶ್ರೀಪತಿ ಭಟ್, ಕಿನ್ನಿಗೋಳಿ ಯುಗಪುರುಷ ಮಾಸಪತ್ರಿಕೆ ಸಂಪಾದಕ ಭುವನಾಭಿರಾಮ ಉಡುಪ ಮತ್ತಿತರರು ಡಾ. ಹೆಗ್ಗಡೆಯವರಿಗೆ ಗೌರವಾರ್ಪಣೆ ಅಭಿನಂದನೆ ಸಲ್ಲಿಸಿದರು.